ಬೆಂಗಳೂರು, ನವೆಂಬರ್ 8: ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಕೆ (Gold and silver Rates) ಈ ವಾರ ಭರ್ಜರಿಯಾಗಿ ನಡೆದಿದೆ. ಯುದ್ದದ ಭಯದಲ್ಲಿ ಚಿನ್ನದ ಮೇಲೆ ಹಣ ಹಾಕಿದ್ದ ಹೂಡಿಕೆದಾರರು ಈಗ ಡಾಲರ್ನತ್ತ ಮುಗಿಬೀಳುವುದು ನಡೆದಿದೆ. ಈ ಕಾರಣಕ್ಕೆ ಚಿನ್ನಕ್ಕೆ ಬೇಡಿಕೆ ತುಸು ತಗ್ಗಿದೆ. ಪರಿಣಾಮವಾಗಿ ಚಿನ್ನದ ಬೆಲೆ ಇಳಿಮುಖವಾಗುತ್ತಿದೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಚಿನ್ನದ ಬೆಲೆ ಸಾಕಷ್ಟು ಕಡಿಮೆ ಆಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 07 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ