Gold Silver Price on 8th November: ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಏರಿಕೆ

Bullion Market 2024 November 8th: ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್​ಗೆ 85 ರೂನಷ್ಟು ಏರಿಕೆ ಆಗಿದೆ. 7,200 ರೂ ಇದ್ದ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,285 ರೂಗೆ ಏರಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 7,856 ರೂನಿಂದ 7,947 ರೂಗೆ ಏರಿದೆ. ಬೆಳ್ಳಿ ಬೆಲೆ 93 ಮತ್ತು 102 ರೂ ಇದ್ದದ್ದು 94 ರೂ ಮತ್ತು 103 ರೂಗೆ ಹೆಚ್ಚಿದೆ.

Gold Silver Price on 8th November: ಚಿನ್ನ, ಬೆಳ್ಳಿ ಎರಡೂ ಬೆಲೆ ಭರ್ಜರಿ ಏರಿಕೆ
ಚಿನ್ನ

Updated on: Nov 08, 2024 | 10:22 AM

ಬೆಂಗಳೂರು, ನವೆಂಬರ್ 8: ನಿನ್ನೆ ಭಾರೀ ಮೊತ್ತದಷ್ಟು ಕುಸಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತು ಗಣನೀಯವಾಗಿ ಹೆಚ್ಚಳವಾಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 85 ರೂನಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 91 ರೂನಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ ಒಂದು ರೂನಷ್ಟು ಹೆಚ್ಚಳವಾಗಿದೆ. ಯಥಾಪ್ರಕಾರ, ಬೆಲೆ ವ್ಯತ್ಯಯ ಭಾರತೀಯ ಚಿನಿವಾರ ಪೇಟೆಯಲ್ಲಿ ಆಗುತ್ತಿದೆ. ವಿದೇಶಗಳಲ್ಲಿ ಕೆಲ ತಿಂಗಳಿಂದ ಬಹುತೇಕ ಬೆಲೆ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,610 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 94 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 94 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,850 ರೂ
  • ಚೆನ್ನೈ: 72,850 ರೂ
  • ಮುಂಬೈ: 72,850 ರೂ
  • ದೆಹಲಿ: 73,000 ರೂ
  • ಕೋಲ್ಕತಾ: 72,850 ರೂ
  • ಕೇರಳ: 72,850 ರೂ
  • ಅಹ್ಮದಾಬಾದ್: 72,900 ರೂ
  • ಜೈಪುರ್: 73,000 ರೂ
  • ಲಕ್ನೋ: 73,000 ರೂ
  • ಭುವನೇಶ್ವರ್: 72,850 ರೂ

ಇದನ್ನೂ ಓದಿ: Petrol Diesel Price on November 08: ಕಚ್ಚಾತೈಲ ಬೆಲೆ ಏರಿಕೆ, ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ದರ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,870 ರುಪಾಯಿ)
  • ದುಬೈ: 3,070 ಡಿರಾಮ್ (70,520 ರುಪಾಯಿ)
  • ಅಮೆರಿಕ: 820 ಡಾಲರ್ (69,180 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,750 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,290 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,280 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (71,110 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,310 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,400 ರೂ
  • ಚೆನ್ನೈ: 10,300 ರೂ
  • ಮುಂಬೈ: 9,400 ರೂ
  • ದೆಹಲಿ: 9,400 ರೂ
  • ಕೋಲ್ಕತಾ: 9,400 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,400 ರೂ
  • ಜೈಪುರ್: 9,400 ರೂ
  • ಲಕ್ನೋ: 9,400 ರೂ
  • ಭುವನೇಶ್ವರ್: 10,300 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us