ಬೆಂಗಳೂರು, ನವೆಂಬರ್ 9: ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಕೆ (Gold and silver Rates) ಮುಂದುವರಿದಿದೆ. ಅಮೆರಿಕದ ಫೆಡರಲ್ ರಿಸರ್ವ್ ಹಣದುಬ್ಬರ ನಿಯಂತ್ರಿಸಲು ಬಡ್ಡಿದರ ಪರಿಷ್ಕರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಸದ್ಯ ಚಿನ್ನದಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದ್ದಾರೆ. ಬಡ್ಡಿದರ ವಿಚಾರದಲ್ಲಿ ಸ್ಪಷ್ಟತೆ ಸಿಗುವವರೆಗೂ ಈ ಬೆಳವಣಿಗೆ ಮುಂದುವರಿಯುತ್ತದೆ. ಬಡ್ಡಿದರ ಹೆಚ್ಚಿಸಿದಲ್ಲಿ ಚಿನ್ನದ ಬೆಲೆ ಇನ್ನಷ್ಟು ಕಡಿಮೆ ಆಗುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಶ್ರೀಲಂಕಾದಲ್ಲಿ ಅದಾನಿ ನೇತೃತ್ವದ ಡಬ್ಲ್ಯುಸಿಟಿ ಪೋರ್ಟ್ ಟರ್ಮಿನಲ್ ಪ್ರಾಜೆಕ್ಟ್ಗೆ ಅಮೆರಿಕದ ಹಣಕಾಸು ನೆರವು
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ