ಬೆಂಗಳೂರು, ಅಕ್ಟೋಬರ್ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ತೀಕ್ಷ್ಣವಾಗಿ ಮೇಲೇರುತ್ತಿವೆ. ಭಾರತ ಹಾಗೂ ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆಗಳು ಏರಿಕೆ ಆಗಿವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಂಗಳೂರು ಹಾಗೂ ಕರ್ನಾಟಕದ ಇತರೆಡೆ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಾದರೆ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಇಸ್ರೇಲ್ ಯುದ್ಧದ ಪರಿಣಾಮವಾಗಿ ಚಿನ್ನಕ್ಕೆ ಬೇಡಿಕೆ ಹೆಚ್ಚುತ್ತಿರುವುದು ಹೌದು. ಈ ಕಾರಣಕ್ಕೆ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 53,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 58,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,260 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 53,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 6,900 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಇಸ್ರೇಲ್ ಹಮಾಸ್ ಯುದ್ಧದ ಪರಿಣಾಮ; ಕಚ್ಛಾ ತೈಲಬೆಲೆ ಶೇ. 5ರಷ್ಟು ಹೆಚ್ಚಳ; ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸಾಧ್ಯತೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ