ಬೆಂಗಳೂರು, ಅಕ್ಟೋಬರ್ 12: ಇಸ್ರೇಲ್ ಯುದ್ಧದ ಪರಿಣಾಮ ನಾಲ್ಕೈದು ದಿನಗಳಿಂದ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಬಹುತೇಕ ವಿಶ್ರಾಂತಿಯಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ವಿದೇಶಗಳಲ್ಲಿ ಕೆಲವೆಡೆ ಏರಿದೆ, ಮತ್ತೆ ಕೆಲವೆಡೆ ಇಳಿದಿದೆ. ಬೆಳ್ಳಿ ಬೆಲೆ ಬಹುತೇಕ ಕಡೆ ಅಲ್ಪ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಮಾತ್ರ ಬೆಳ್ಳಿ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 53,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 58,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,210 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 53,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,100 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Home Loan Tricks: ಗೃಹಸಾಲ ಕಟ್ಟಿಕಟ್ಟಿ ಸಾಕಾಗಿದೆಯಾ? ಹೋಲ್ ಲೋನ್ ಬೇಗ ತೀರಿಸುವ ಟ್ರಿಕ್ಸ್ ಇಲ್ಲಿದೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ