Gold Silver Price on 16th October: ಚಿನ್ನ, ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ; 7,800 ರೂ ಸಮೀಪಕ್ಕೆ ಅಪರಂಜಿ ಚಿನ್ನದ ಬೆಲೆ

Bullion Market 2024 October 16th: ಚಿನ್ನದ ಬೆಲೆ ಬುಧವಾರ ಗ್ರಾಮ್​ಗೆ 45 ರೂನಷ್ಟು ಇಳಿಕೆ ಆಗಿದೆ. 7,095 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 7,140 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 5,842 ರೂಗೆ ಏರಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಇಳಿದಿದೆ.

Gold Silver Price on 16th October: ಚಿನ್ನ, ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ; 7,800 ರೂ ಸಮೀಪಕ್ಕೆ ಅಪರಂಜಿ ಚಿನ್ನದ ಬೆಲೆ
ಚಿನ್ನ

Updated on: Oct 16, 2024 | 10:42 AM

ಬೆಂಗಳೂರು, ಅಕ್ಟೋಬರ್ 16: ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆಯ ಹಾದಿಗೆ ಬಂದಿವೆ. ಸತತ ಎರಡು ದಿನ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇಂದು ಗ್ರಾಮ್​ಗೆ 45 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಇಂದು ಗ್ರಾಮ್​ಗೆ 10 ಪೈಸೆ ಏರಿಕೆ ಆಗಿ, ನಿನ್ನೆಯ ಇಳಿಕೆಯನ್ನು ಸರಿದೂಗಿಸಿದೆ. ಬೆಂಗಳೂರಿನಲ್ಲಿ ಮಾತ್ರ ಬೆಳ್ಳಿ ಬೆಲೆ 86 ರೂ ಇದ್ದದ್ದು 92 ರೂಗೆ ಏರಿದೆ. ಮುಂಬೈ ಮೊದಲಾದೆಡೆ 97 ರೂ, ಚೆನ್ನೈ ಮೊದಲಾದೆಡೆ 103 ರೂ ಇದೆ. ಚಿನ್ನದ ಬೆಲೆ ಭಾರತದಲ್ಲಿ ಮಾತ್ರವಲ್ಲ, ಬಹುತೇಕ ವಿದೇಶಗಳ ಮಾರುಕಟ್ಟೆಗಳಲ್ಲೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 7,800 ರೂ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,890 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,400 ರೂ
  • ಚೆನ್ನೈ: 71,400 ರೂ
  • ಮುಂಬೈ: 71,400 ರೂ
  • ದೆಹಲಿ: 71,550 ರೂ
  • ಕೋಲ್ಕತಾ: 71,400 ರೂ
  • ಕೇರಳ: 71,400 ರೂ
  • ಅಹ್ಮದಾಬಾದ್: 71,450 ರೂ
  • ಜೈಪುರ್: 71,550 ರೂ
  • ಲಕ್ನೋ: 71,550 ರೂ
  • ಭುವನೇಶ್ವರ್: 71,400 ರೂ

ಇದನ್ನೂ ಓದಿ: Petrol Diesel Price on October 16: ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,600 ರಿಂಗಿಟ್ (70,460 ರುಪಾಯಿ)
  • ದುಬೈ: 2,970 ಡಿರಾಮ್ (67,970 ರುಪಾಯಿ)
  • ಅಮೆರಿಕ: 810 ಡಾಲರ್ (68,090 ರುಪಾಯಿ)
  • ಸಿಂಗಾಪುರ: 1,087 ಸಿಂಗಾಪುರ್ ಡಾಲರ್ (69,860 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (68,710 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,070 ರುಪಾಯಿ)
  • ಓಮನ್: 316.50 ಒಮಾನಿ ರಿಯಾಲ್ (69,110 ರುಪಾಯಿ)
  • ಕುವೇತ್: 242.40 ಕುವೇತಿ ದಿನಾರ್ (66,430 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,200 ರೂ
  • ಚೆನ್ನೈ: 10,300 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,300 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us