AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17 October: ಎರಡು ವಾರದ ಏರಿಕೆ ಬಳಿಕ ಕುಸಿದ ಚಿನ್ನದ ಬೆಲೆ; ಬೆಳ್ಳಿ ದರ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, October 17th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17 October: ಎರಡು ವಾರದ ಏರಿಕೆ ಬಳಿಕ ಕುಸಿದ ಚಿನ್ನದ ಬೆಲೆ; ಬೆಳ್ಳಿ ದರ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 17, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 17: ಎರಡು ವಾರ ಸತತವಾಗಿ ಏರಿಕೆ ಆಗುತ್ತಾ ಬಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಈ ವಾರ ಇಳಿಕೆಯ ಹಾದಿಗೆ ಬಂದಂತಿದೆ. ಡಾಲರ್ ಮೇಲಿನ ಹೂಡಿಕೆಗಳು ಹೆಚ್ಚುತ್ತಿವೆ. ಹೀಗಾಗಿ, ಚಿನ್ನಕ್ಕೆ ಬೇಡಿಕೆ ತುಸು ಕಡಿಮೆ ಆಗಿರಬಹುದು. ಮಲೇಷ್ಯಾ ಹೊರತುಪಡಿಸಿ ಉಳಿದ ಬಹುತೇಕ ಕಡೆ ಚಿನ್ನದ ಬೆಲೆ ಕಡಿಮೆ ಆಗಿದೆ. ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,410 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 17ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,100 ರೂ
  • ಚೆನ್ನೈ: 55,300 ರೂ
  • ಮುಂಬೈ: 55,100 ರೂ
  • ದೆಹಲಿ: 55,250 ರೂ
  • ಕೋಲ್ಕತಾ: 55,100 ರೂ
  • ಕೇರಳ: 55,100 ರೂ
  • ಅಹ್ಮದಾಬಾದ್: 55,150 ರೂ
  • ಜೈಪುರ್: 55,250 ರೂ
  • ಲಕ್ನೋ: 55,250 ರೂ
  • ಭುವನೇಶ್ವರ್: 55,100 ರೂ

ಇದನ್ನೂ ಓದಿ: Arecanut Price 16 Oct: ಅಡಿಕೆ ಧಾರಣೆ, ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (50,810 ರುಪಾಯಿ)
  • ದುಬೈ: 2,147.50 ಡಿರಾಮ್ (48,689 ರುಪಾಯಿ)
  • ಅಮೆರಿಕ: 595 ಡಾಲರ್ (49,535 ರುಪಾಯಿ)
  • ಸಿಂಗಾಪುರ: 818 ಸಿಂಗಾಪುರ್ ಡಾಲರ್ (49,712 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (50,553 ರೂ)
  • ಸೌದಿ ಅರೇಬಿಯಾ: 2,210 ಸೌದಿ ರಿಯಾಲ್ (49,049 ರುಪಾಯಿ)
  • ಓಮನ್: 235 ಒಮಾನಿ ರಿಯಾಲ್ (50,818 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (49,793 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,700 ರೂ
  • ಮುಂಬೈ: 7,410 ರೂ
  • ದೆಹಲಿ: 7,410 ರೂ
  • ಕೋಲ್ಕತಾ: 7,410 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,410 ರೂ
  • ಜೈಪುರ್: 7,410 ರೂ
  • ಲಕ್ನೋ: 7,410 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ