ಬೆಂಗಳೂರು, ಅಕ್ಟೋಬರ್ 17: ಎರಡು ವಾರ ಸತತವಾಗಿ ಏರಿಕೆ ಆಗುತ್ತಾ ಬಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಈ ವಾರ ಇಳಿಕೆಯ ಹಾದಿಗೆ ಬಂದಂತಿದೆ. ಡಾಲರ್ ಮೇಲಿನ ಹೂಡಿಕೆಗಳು ಹೆಚ್ಚುತ್ತಿವೆ. ಹೀಗಾಗಿ, ಚಿನ್ನಕ್ಕೆ ಬೇಡಿಕೆ ತುಸು ಕಡಿಮೆ ಆಗಿರಬಹುದು. ಮಲೇಷ್ಯಾ ಹೊರತುಪಡಿಸಿ ಉಳಿದ ಬಹುತೇಕ ಕಡೆ ಚಿನ್ನದ ಬೆಲೆ ಕಡಿಮೆ ಆಗಿದೆ. ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,410 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 16 Oct: ಅಡಿಕೆ ಧಾರಣೆ, ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)