Gold Silver Price on 17th October: ಚಿನ್ನದ ಬೆಲೆ ಮತ್ತೆ ಹೆಚ್ಚಳ; ಬೆಳ್ಳಿ ದರದಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ

Bullion Market 2024 October 17th: ಚಿನ್ನದ ಬೆಲೆ ಇಂದು ಗುರುವಾರ ಗ್ರಾಮ್​ಗೆ 20 ರೂನಷ್ಟು ಹೆಚ್ಚಳವಾಗಿದೆ. ಎರಡು ದಿನದಲ್ಲಿ ಹೆಚ್ಚಳವಾಗಿರುವುದು 65 ರೂ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 7,811 ರೂ ಆಗಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ 7,160 ರೂಗೆ ಏರಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ.

Gold Silver Price on 17th October: ಚಿನ್ನದ ಬೆಲೆ ಮತ್ತೆ ಹೆಚ್ಚಳ; ಬೆಳ್ಳಿ ದರದಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 17, 2024 | 10:36 AM

ಬೆಂಗಳೂರು, ಅಕ್ಟೋಬರ್ 17: ಭಾರತದಲ್ಲಿ ಚಿನ್ನದ ಬೆಲೆ ಗುರುವಾರವೂ ಹೆಚ್ಚಳವಾಗಿದೆ. ನಿನ್ನೆ ಗ್ರಾಮ್​ಗೆ 45 ರೂನಷ್ಟು ಏರಿಕೆಯಾಗಿದ್ದ ಹಳದಿ ಲೋಹದ ಬೆಲೆ ಇವತ್ತು 20 ರೂನಷ್ಟು ದುಬಾರಿಯಾಗಿದೆ. ವಿದೇಶಗಳಲ್ಲಿ ಇದರ ಬೆಲೆಯಲ್ಲಿ ಯಾವ ವ್ಯತ್ಯಯವೂ ಆಗಿಲ್ಲ. ಭಾರತದಲ್ಲಿ ಮಾತ್ರವೇ ಹೆಚ್ಚಳ ಆಗಿರುವುದು. ಅಪರಂಜಿ ಚಿನ್ನದ ಬೆಲೆ 7,800 ರೂ ಗಡಿ ದಾಟಿ ಹೋಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,160 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 6,000 ರೂ ಸಮೀಪಕ್ಕೆ ದೌಡಾಯಿಸುತ್ತಿದೆ. ಈ ಮಧ್ಯೆ ಬೆಳ್ಳಿ ಬೆಲೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. 92 ರೂ, 97 ರೂ ಮತ್ತು 103 ರೂನಲ್ಲಿ ವಿವಿಧೆಡೆ ಬೆಳ್ಳಿ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,110 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,600 ರೂ
  • ಚೆನ್ನೈ: 71,600 ರೂ
  • ಮುಂಬೈ: 71,600 ರೂ
  • ದೆಹಲಿ: 71,750 ರೂ
  • ಕೋಲ್ಕತಾ: 71,600 ರೂ
  • ಕೇರಳ: 71,600 ರೂ
  • ಅಹ್ಮದಾಬಾದ್: 71,650 ರೂ
  • ಜೈಪುರ್: 71,750 ರೂ
  • ಲಕ್ನೋ: 71,750 ರೂ
  • ಭುವನೇಶ್ವರ್: 71,600 ರೂ

ಇದನ್ನೂ ಓದಿ: Petrol Diesel Price on October 17: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,600 ರಿಂಗಿಟ್ (70,190 ರುಪಾಯಿ)
  • ದುಬೈ: 2,970 ಡಿರಾಮ್ (67,940 ರುಪಾಯಿ)
  • ಅಮೆರಿಕ: 810 ಡಾಲರ್ (68,060 ರುಪಾಯಿ)
  • ಸಿಂಗಾಪುರ: 1,087 ಸಿಂಗಾಪುರ್ ಡಾಲರ್ (69,540 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (68,680 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,040 ರುಪಾಯಿ)
  • ಓಮನ್: 316.50 ಒಮಾನಿ ರಿಯಾಲ್ (69,040 ರುಪಾಯಿ)
  • ಕುವೇತ್: 242.40 ಕುವೇತಿ ದಿನಾರ್ (66,390 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,200 ರೂ
  • ಚೆನ್ನೈ: 10,300 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,300 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:35 am, Thu, 17 October 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ