ಬೆಂಗಳೂರು, ಅಕ್ಟೋಬರ್ 20: ವಾರಾಂತ್ಯದಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold, silver rates) ಭಾರೀ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ಹೆಚ್ಚಳ ಕಂಡಿದೆ. 7,240 ರೂ ಇದ್ದ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,280 ರೂ ತಲುಪಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 7,950 ರೂ ಗಡಿ ಸಮೀಪ ಬಂದಿದೆ. ಬೆಳ್ಳಿ ಬೆಲೆ ಚೆನ್ನೈ ಮೊದಲಾದ ಕಡೆ ಗ್ರಾಮ್ಗೆ 107 ರೂಗೆ ಏರಿದೆ. ಬೆಂಗಳೂರಿನಲ್ಲೇ ಬೆಳ್ಳಿ ಬೆಲೆ 97 ರೂ ಆಗಿದೆ. ಮುಂಬೈ ಮೊದಲಾದ ಪ್ರಮುಖ ಮಾರುಕಟ್ಟೆಗಳಲ್ಲಿ ಬೆಳ್ಳಿ ಬೆಲೆ 100 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಹಲವು ದೇಶಗಳಲ್ಲಿ ಆಭರಣ ಚಿನ್ನದ ಬೆಲೆ 7,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 78,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 72,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,410 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on October 20: ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಏರಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ