AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 23 October: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, October 23rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,750 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.30 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 23 October: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 23, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 23: ಇಸ್ರೇಲ್ ಯುದ್ಧದ ತೀವ್ರತೆ ಕಡಿಮೆ ಆಗುವುದಿಲ್ಲ ಎಂಬುದು ತೋರತೊಡಗುತ್ತಿರುವಂತೆಯೇ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ (Gold and silver Rates) ನಾಗಾಲೋಟದಲ್ಲಿ ಆಗತೊಡಗಿದೆ. ಹಬ್ಬದ ಸೀಸನ್​ನಲ್ಲಿ ಚಿನ್ನ ಖರೀದಿಸಬೇಕೆನ್ನುವವರು ಹೆಚ್ಚು ಬೆಲೆ ತೆರಬೇಕಾಗಿದೆ. ದೇಶ ವಿದೇಶಗಲ್ಲಿ ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಯೂ ಗಗನಕ್ಕೇರುತ್ತಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 23ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 753 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,600 ರೂ
  • ಚೆನ್ನೈ: 56,700 ರೂ
  • ಮುಂಬೈ: 56,600 ರೂ
  • ದೆಹಲಿ: 56,750 ರೂ
  • ಕೋಲ್ಕತಾ: 56,600 ರೂ
  • ಕೇರಳ: 56,600 ರೂ
  • ಅಹ್ಮದಾಬಾದ್: 56,650 ರೂ
  • ಜೈಪುರ್: 56,750 ರೂ
  • ಲಕ್ನೋ: 56,750 ರೂ
  • ಭುವನೇಶ್ವರ್: 56,600 ರೂ

ಇದನ್ನೂ ಓದಿ: ಹಬ್ಬಕ್ಕೆ ಎಷ್ಟು ಖರ್ಚು ಮಾಡಬೇಕು? ಇನ್ನೂ ದೀಪಾವಳಿ ಇದೆ… ನಿಮ್ಮ ಬಜೆಟ್ ನಿಗದಿ ಮಾಡಲು ಇಲ್ಲಿದೆ ಟಿಪ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (51,980 ರುಪಾಯಿ)
  • ದುಬೈ: 2,222.50 ಡಿರಾಮ್ (50,319 ರುಪಾಯಿ)
  • ಅಮೆರಿಕ: 610 ಡಾಲರ್ (50,727 ರುಪಾಯಿ)
  • ಸಿಂಗಾಪುರ: 847 ಸಿಂಗಾಪುರ್ ಡಾಲರ್ (51,329 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (52,218 ರೂ)
  • ಸೌದಿ ಅರೇಬಿಯಾ: 2,290 ಸೌದಿ ರಿಯಾಲ್ (50,764 ರುಪಾಯಿ)
  • ಓಮನ್: 242 ಒಮಾನಿ ರಿಯಾಲ್ (52,268 ರುಪಾಯಿ)
  • ಕುವೇತ್: 191.50 ಕುವೇತಿ ದಿನಾರ್ (51,497 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,870 ರೂ
  • ಮುಂಬೈ: 7,530 ರೂ
  • ದೆಹಲಿ: 7,530 ರೂ
  • ಕೋಲ್ಕತಾ: 7,530 ರೂ
  • ಕೇರಳ: 7,870 ರೂ
  • ಅಹ್ಮದಾಬಾದ್: 7,530 ರೂ
  • ಜೈಪುರ್: 7,530 ರೂ
  • ಲಕ್ನೋ: 7,530 ರೂ
  • ಭುವನೇಶ್ವರ್: 7,870 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ