ಬೆಂಗಳೂರು, ಅಕ್ಟೋಬರ್ 23: ಇಸ್ರೇಲ್ ಯುದ್ಧದ ತೀವ್ರತೆ ಕಡಿಮೆ ಆಗುವುದಿಲ್ಲ ಎಂಬುದು ತೋರತೊಡಗುತ್ತಿರುವಂತೆಯೇ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ (Gold and silver Rates) ನಾಗಾಲೋಟದಲ್ಲಿ ಆಗತೊಡಗಿದೆ. ಹಬ್ಬದ ಸೀಸನ್ನಲ್ಲಿ ಚಿನ್ನ ಖರೀದಿಸಬೇಕೆನ್ನುವವರು ಹೆಚ್ಚು ಬೆಲೆ ತೆರಬೇಕಾಗಿದೆ. ದೇಶ ವಿದೇಶಗಲ್ಲಿ ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಯೂ ಗಗನಕ್ಕೇರುತ್ತಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,450 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಹಬ್ಬಕ್ಕೆ ಎಷ್ಟು ಖರ್ಚು ಮಾಡಬೇಕು? ಇನ್ನೂ ದೀಪಾವಳಿ ಇದೆ… ನಿಮ್ಮ ಬಜೆಟ್ ನಿಗದಿ ಮಾಡಲು ಇಲ್ಲಿದೆ ಟಿಪ್ಸ್
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ