Gold Silver Price on 23rd October: 8,000 ರೂ ಗಡಿ ದಾಟಿದ ಅಪರಂಜಿ ಚಿನ್ನ; ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಚಿನ್ನ, ಬೆಳ್ಳಿ ಬೆಲೆ

Bullion Market 2024 October 23rd: ಚಿನ್ನದ ಬೆಲೆ ಇಂದು ಬುಧವಾರ ಗ್ರಾಮ್​ಗೆ 40 ರೂನಷ್ಟು ಏರಿದೆ. ಬೆಳ್ಳಿ ಬೆಲೆ ಚೆನ್ನೈ ಮೊದಲಾದೆಡೆ 112 ರೂ ಆಗಿದೆ. ಮುಂಬೈನಲ್ಲಿ 101 ರೂ ಇದ್ದದ್ದು 104 ರೂ ಆಗಿದೆ. ಬೆಂಗಳೂರಿನಲ್ಲಿ 96 ರೂ ಇದ್ದ ಬೆಳ್ಳಿ ಬೆಲೆ 99 ರೂ ಆಗಿದೆ. ದೇಶ, ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎಷ್ಟಿವೆ ಎನ್ನುವ ಮಾಹಿತಿ ಇಲ್ಲಿದೆ..

Gold Silver Price on 23rd October: 8,000 ರೂ ಗಡಿ ದಾಟಿದ ಅಪರಂಜಿ ಚಿನ್ನ; ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ಚಿನ್ನ, ಬೆಳ್ಳಿ ಬೆಲೆ
ಚಿನ್ನ

Updated on: Oct 23, 2024 | 10:36 AM

ಬೆಂಗಳೂರು, ಅಕ್ಟೋಬರ್ 23: ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳ ಬುಧವಾರವೂ ಮುಂದುವರಿದಿದೆ. ನಿನ್ನೆ ಅಲ್ಪ ಏರಿಕೆ ಕಂಡಿದ್ದ ಈ ಎರಡೂ ಲೋಹಗಳ ಬೆಲೆಯಲ್ಲಿ ಇಂದು ಭಾರೀ ಹೆಚ್ಚಳವಾಗಿದೆ. ಎರಡೂ ಕೂಡ ಸಾರ್ವಕಾಲಿಕ ದಾಖಲೆ ಬೆಲೆ ಮಟ್ಟಕ್ಕೆ ಏರಿವೆ. ಅಪರಂಜಿ ಚಿನ್ನದ ಬೆಲೆ 8,000 ರೂ ಗಡಿ ದಾಟಿದೆ. 18 ಕ್ಯಾರಟ್ ಚಿನ್ನದ ಬೆಲೆ 6,000 ರೂ ಗಡಿ ದಾಟಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,300 ರೂನಿಂದ 7,340 ರೂಗೆ ಏರಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟು ವ್ಯತ್ಯಯವಾಗಿಲ್ಲ. ಭಾರತೀಯ ಮಾರುಕಟ್ಟೆಯಲ್ಲಿ ಮಾತ್ರ ಹೆಚ್ಚಳ ಅಧಿಕವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,070 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 104 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,400 ರೂ
  • ಚೆನ್ನೈ: 73,400 ರೂ
  • ಮುಂಬೈ: 73,400 ರೂ
  • ದೆಹಲಿ: 73,550 ರೂ
  • ಕೋಲ್ಕತಾ: 73,400 ರೂ
  • ಕೇರಳ: 73,400 ರೂ
  • ಅಹ್ಮದಾಬಾದ್: 73,450 ರೂ
  • ಜೈಪುರ್: 73,550 ರೂ
  • ಲಕ್ನೋ: 73,550 ರೂ
  • ಭುವನೇಶ್ವರ್: 73,400 ರೂ

ಇದನ್ನೂ ಓದಿ: ಎಲೆಕ್ಟ್ರಿಕ್ ಬಸ್, ಸೈಕ್ಲಿಂಗ್ ಟ್ರ್ಯಾಕ್, ವಾಕಿಂಗ್… ಹೇಗಿದೆ ನೋಡಿ ಕೇಂದ್ರದ ಅರ್ಬನ್ ಮೊಬಿಲಿಟಿ ಮಿಷನ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (71,260 ರುಪಾಯಿ)
  • ದುಬೈ: 3,070 ಡಿರಾಮ್ (70,270 ರುಪಾಯಿ)
  • ಅಮೆರಿಕ: 820 ಡಾಲರ್ (68,940 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,770 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,030 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,050 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,110 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,900 ರೂ
  • ಚೆನ್ನೈ: 11,200 ರೂ
  • ಮುಂಬೈ: 10,400 ರೂ
  • ದೆಹಲಿ: 10,400 ರೂ
  • ಕೋಲ್ಕತಾ: 10,400 ರೂ
  • ಕೇರಳ: 11,200 ರೂ
  • ಅಹ್ಮದಾಬಾದ್: 10,400 ರೂ
  • ಜೈಪುರ್: 10,400 ರೂ
  • ಲಕ್ನೋ: 10,400 ರೂ
  • ಭುವನೇಶ್ವರ್: 11,200 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us