ಬೆಂಗಳೂರು, ಅಕ್ಟೋಬರ್ 24: ಹಲವು ದಿನಗಳ ಬಳಿಕ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಆಗಿವೆ. ವಿದೇಶಗಳಲ್ಲಿ ಬೆಲೆಗಳು ಹೆಚ್ಚು ವ್ಯತ್ಯಯವಾಗದೇ ಹೋದರೂ ಭಾರತದಲ್ಲಿ ಸತತವಾಗಿ ಏರಇಕೆ ಆಗುತ್ತಾ ಬಂದಿದ್ದವು. ಇದೀಗ ಚಿನ್ನದ ಬೆಲೆ ಗ್ರಾಮ್ಗೆ 55 ರೂನಷ್ಟು ಭರ್ಜರಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಎರಡು ರೂನಷ್ಟು ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,300 ರೂ ಗಡಿಯೊಳಗೆ ಬಂದಿದೆ. 8,000 ರೂ ಗಡಿದಾಟಿದ್ದ ಅಪರಂಜಿ ಚಿನ್ನದ ಬೆಲೆಯೂ ತಗ್ಗಿದೆ. ಬೆಳ್ಳಿ ಬೆಲೆ ಬೆಂಗಳೂರನಲ್ಲಿ ಮೊದಲ ಬಾರಿಗೆ 100 ರೂ ಗಡಿ ಮುಟ್ಟಿದೆ. ಉಳಿದಂತೆ ಇತರೆಡೆ ಬೆಳ್ಳಿ ಬೆಲೆ ಗ್ರಾಮ್ಗೆ 2 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 79,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 72,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ:
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ