Gold Silver Price on 28th October: ಚಿನ್ನದ ಬೆಲೆ ಇಂದು ಸೋಮವಾರ ಭರ್ಜರಿ ಇಳಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ

Bullion Market 2024 October 28th: ಕಳೆದ ವಾರ ತೀವ್ರವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಸೋಮವಾರ ಗ್ರಾಮ್​ಗೆ 45 ರೂನಷ್ಟು ಕಡಿಮೆ ಆಗಿದೆ. ಅಪರಂಜಿ ಚಿನ್ನದ ಬೆಲೆ 7,980 ರೂ ಆಗಿದೆ. 22 ಕ್ಯಾರಟ್ ಮತ್ತು 18 ಕ್ಯಾರಟ್ ಚಿನ್ನದ ಬೆಲೆ ಕ್ರಮವಾಗಿ 7,315 ರೂ, 5,985 ರೂ ಇದೆ. ಬೆಳ್ಳಿ ಬೆಲೆ ಭಾರತದಲ್ಲಿ 97 ರೂ, 98 ರೂ ಮತ್ತು 107 ರೂ ಇದೆ.

Gold Silver Price on 28th October: ಚಿನ್ನದ ಬೆಲೆ ಇಂದು ಸೋಮವಾರ ಭರ್ಜರಿ ಇಳಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ
ಚಿನ್ನ

Updated on: Oct 28, 2024 | 10:16 AM

ಬೆಂಗಳೂರು, ಅಕ್ಟೋಬರ್ 28: ನಿನ್ನೆ ಬಹುತೇಕ ಇಡೀ ವಾರ ಬೆಲೆ ಏರಿಕೆ ಕಂಡಿದ್ದ ಚಿನ್ನ ಈ ವಾರ ಇಳಿಕೆಯೊಂದಿಗೆ ಆರಂಭ ಕಂಡಿದೆ. ಸೋಮವಾರ ಚಿನ್ನದ ಬೆಲೆ ಗ್ರಾಮ್​ಗೆ 45 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 7,360 ರೂ ಇದ್ದದ್ದು 7,315 ರೂಗೆ ಇಳಿದಿದೆ. ಅಪರಂಜಿ ಚಿನ್ನ 8,029 ರೂನಿಂದ 7,980 ರೂಗೆ ಇಳಿದಿದೆ. ವಿದೇಶೀ ಮಾರುಕಟ್ಟೆಗಳಲ್ಲಿ ಹೆಚ್ಚಿನ ಕಡೆ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆ ಕೆಲವಾರು ದಿನಗಳಿಂದ ಯಥಾಸ್ಥಿತಿಯಲ್ಲಿದ್ದು, ಇಂದು ಸೋಮವಾರವೂ ಅದೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 98 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 97 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,150 ರೂ
  • ಚೆನ್ನೈ: 73,150 ರೂ
  • ಮುಂಬೈ: 73,150 ರೂ
  • ದೆಹಲಿ: 73,300 ರೂ
  • ಕೋಲ್ಕತಾ: 73,150 ರೂ
  • ಕೇರಳ: 73,150 ರೂ
  • ಅಹ್ಮದಾಬಾದ್: 73,200 ರೂ
  • ಜೈಪುರ್: 73,300 ರೂ
  • ಲಕ್ನೋ: 73,300 ರೂ
  • ಭುವನೇಶ್ವರ್: 73,150 ರೂ

ಇದನ್ನೂ ಓದಿ: ಎಸ್​ಬಿಐ ಅತ್ಯುತ್ತಮ ಭಾರತೀಯ ಬ್ಯಾಂಕ್; ಜೆಪಿ ಮಾರ್ಗನ್ ಚೇಸ್ ವಿಶ್ವದ ಅತ್ಯುತ್ತಮ ಬ್ಯಾಂಕ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,940 ರುಪಾಯಿ)
  • ದುಬೈ: 3,070 ಡಿರಾಮ್ (70,270 ರುಪಾಯಿ)
  • ಅಮೆರಿಕ: 820 ಡಾಲರ್ (68,940 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,400 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,040 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,050 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,080 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,700 ರೂ
  • ಮುಂಬೈ: 9,800 ರೂ
  • ದೆಹಲಿ: 9,800 ರೂ
  • ಕೋಲ್ಕತಾ: 9,800 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,800 ರೂ
  • ಜೈಪುರ್: 9,800 ರೂ
  • ಲಕ್ನೋ: 9,800 ರೂ
  • ಭುವನೇಶ್ವರ್: 10,700 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us