Gold Silver Price on 29th October: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಏರಿಕೆ; ಬೆಳ್ಳಿಯೂ ದುಬಾರಿ

Bullion Market 2024 October 29th: ಚಿನ್ನದ ಬೆಲೆ 8,045 ರೂಗೆ ಏರಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ 7,375 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 6,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ 99 ರೂ ಮತ್ತು 108 ರೂ ಆಗಿದೆ.

Gold Silver Price on 29th October: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಏರಿಕೆ; ಬೆಳ್ಳಿಯೂ ದುಬಾರಿ
ಚಿನ್ನ

Updated on: Oct 29, 2024 | 10:57 AM

ಬೆಂಗಳೂರು, ಅಕ್ಟೋಬರ್ 29: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಏರಿಕೆ ಹಾದಿಗೆ ಬಂದಿವೆ. ನಿನ್ನೆ 45 ರೂ ಕಡಿಮೆ ಆಗಿದ್ದ ಚಿನ್ನದ ಬೆಲೆ ಇಂದು 60 ರೂನಷ್ಟು ಹೆಚ್ಚಳವಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆ ಗ್ರಾಮ್​ಗೆ 300 ರೂಗಿಂತಲೂ ಹೆಚ್ಚಿನ ಪ್ರಮಾಣದಷ್ಟು ಏರಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 2 ರೂನಷ್ಟು ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 97 ರೂ ಇದ್ದ ಬೆಳ್ಳಿ ಬೆಲೆ 99 ರೂಗೆ ಹೆಚ್ಚಿದೆ. ಇನ್ನು, ಚೆನ್ನೈ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 107 ರೂನಿಂದ 108 ರೂಗೆ ಏರಿದೆ. ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಮಾತ್ರವೇ ಏರಿಕೆ ಹೆಚ್ಚಾಗಿರುವುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,450 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,340 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 99 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 99 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,750 ರೂ
  • ಚೆನ್ನೈ: 73,750 ರೂ
  • ಮುಂಬೈ: 73,750 ರೂ
  • ದೆಹಲಿ: 73,900 ರೂ
  • ಕೋಲ್ಕತಾ: 73,750 ರೂ
  • ಕೇರಳ: 73,750 ರೂ
  • ಅಹ್ಮದಾಬಾದ್: 73,800 ರೂ
  • ಜೈಪುರ್: 73,900 ರೂ
  • ಲಕ್ನೋ: 73,900 ರೂ
  • ಭುವನೇಶ್ವರ್: 73,750 ರೂ

ಇದನ್ನೂ ಓದಿ: ಮನೆ ಖರೀದಿಸಿ, ಬಾಡಿಗೆಯನ್ನೂ ಕಟ್ಟಿ ಎಂದ್ರೆ ಹೇಗೆ? ಎಜಿಆರ್ ಶುಲ್ಕ ರದ್ದುಗೊಳಿಸುವಂತೆ ಟೆಲಿಕಾಂ ಕಂಪನಿಗಳಿಂದ ಸರ್ಕಾರಕ್ಕೆ ಒತ್ತಾಯ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,790 ರುಪಾಯಿ)
  • ದುಬೈ: 3,070 ಡಿರಾಮ್ (70,270 ರುಪಾಯಿ)
  • ಅಮೆರಿಕ: 820 ಡಾಲರ್ (68,940 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,390 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,030 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,060 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,080 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,900 ರೂ
  • ಚೆನ್ನೈ: 10,800 ರೂ
  • ಮುಂಬೈ: 9,900 ರೂ
  • ದೆಹಲಿ: 9,900 ರೂ
  • ಕೋಲ್ಕತಾ: 9,900 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,900 ರೂ
  • ಜೈಪುರ್: 9,900 ರೂ
  • ಲಕ್ನೋ: 9,900 ರೂ
  • ಭುವನೇಶ್ವರ್: 10,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us