Gold Silver Price on 02 October: ಚಿನ್ನ ಮತ್ತು ಬೆಳ್ಳಿ ಬೆಲೆ ಕುಸಿತ ಮುಂದುವರಿಕೆ; ಚಿನ್ನವಂತೂ ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, October 2nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,200 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 53,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,170 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 02 October: ಚಿನ್ನ ಮತ್ತು ಬೆಳ್ಳಿ ಬೆಲೆ ಕುಸಿತ ಮುಂದುವರಿಕೆ; ಚಿನ್ನವಂತೂ ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Oct 02, 2023 | 5:00 AM

ಬೆಂಗಳೂರು, ಅಕ್ಟೋಬರ್ 02: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕುಸಿತ ಮುಂದುವರಿಯುತ್ತಿದೆ. ಚಿನ್ನದ ಬೆಲೆಯಂತೂ ದೊಡ್ಡ ಪ್ರಮಾಣದಲ್ಲಿಇಳಿಯುತ್ತಿದೆ. ಭಾರತದಲ್ಲಿ ಹಬ್ಬದ ಋತು ಇದ್ದರೂ ಚಿನ್ನದ ಬೆಲೆ ಕುಸಿತ ನಿಲ್ಲುತ್ತಿಲ್ಲ. ಬೆಳ್ಳಿ ಬೆಲೆಯಲ್ಲೂ ತುಸು ಇಳಿಕೆಯಾಗಿದೆ. ಅಮೆರಿಕದ ಬಾಂಡ್​ಗಳ ಮೇಲೆ ಹೂಡಿಕೆದಾರರ ಚಿತ್ತ ನೆಟ್ಟಿರುವುದರಿಂದ ಚಿನ್ನಕ್ಕೆ ಬೇಡಿಕೆ ಸದ್ಯದ ಮಟ್ಟಿಗೆ ಕಡಿಮೆ ಆಗಿದೆ. ಕಳೆದ 6 ತಿಂಗಳಲ್ಲೇ ಚಿನ್ನದ ಬೆಲೆ ಕನಿಷ್ಠ ಮಟ್ಟಕ್ಕೆ ಇಳಿದಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 58,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 53,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,170 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 2ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 717 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 53,350 ರೂ
  • ಚೆನ್ನೈ: 53,600 ರೂ
  • ಮುಂಬೈ: 53,350 ರೂ
  • ದೆಹಲಿ: 53,500 ರೂ
  • ಕೋಲ್ಕತಾ: 53,350 ರೂ
  • ಕೇರಳ: 53,350 ರೂ
  • ಅಹ್ಮದಾಬಾದ್: 53,400 ರೂ
  • ಜೈಪುರ್: 53,500 ರೂ
  • ಲಕ್ನೋ: 54,500 ರೂ
  • ಭುವನೇಶ್ವರ್: 53,350 ರೂ

ಇದನ್ನೂ ಓದಿ: ಬೆಂಗಳೂರು ಗುಲಾಬಿ ಈರುಳ್ಳಿ ರಫ್ತಿಗೆ ನಿರ್ಬಂಧ ರದ್ದು; ಸೆ. 29ರಿಂದಲೇ ಅನುಮತಿ; ಆದರೆ ಷರತ್ತುಗಳಿವೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,780 ರಿಂಗಿಟ್ (49,164 ರುಪಾಯಿ)
  • ದುಬೈ: 2,072.50 ಡಿರಾಮ್ (46,852 ರುಪಾಯಿ)
  • ಅಮೆರಿಕ: 570 ಡಾಲರ್ (47,329 ರುಪಾಯಿ)
  • ಸಿಂಗಾಪುರ: 786 ಸಿಂಗಾಪುರ್ ಡಾಲರ್ (47,764 ರುಪಾಯಿ)
  • ಕತಾರ್: 2,145 ಕತಾರಿ ರಿಯಾಲ್ (48,852 ರೂ)
  • ಓಮನ್: 226.50 ಒಮಾನಿ ರಿಯಾಲ್ (48,849 ರುಪಾಯಿ)
  • ಕುವೇತ್: 179 ಕುವೇತಿ ದಿನಾರ್ (48,082 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,170 ರೂ
  • ಚೆನ್ನೈ: 7,600 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us