Gold Silver Price on 2nd October: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ

Bullion Market 2024 October 2nd: ಸತತ ಮೂರ್ನಾಲ್ಕು ದಿನ ಕುಸಿದಿದ್ದ ಚಿನ್ನದ ಬೆಲೆ ಇಂದು ಬುಧವಾರ ಚೇತರಿಸಿಕೊಂಡಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ 7,050 ರೂ ಇದ್ದದ್ದು 7,100 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 7,700 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ 95 ರೂನಲ್ಲಿ ಮುಂದುವರಿದಿದೆ.

Gold Silver Price on 2nd October: ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ
ಚಿನ್ನ

Updated on: Oct 02, 2024 | 10:33 AM

ಬೆಂಗಳೂರು, ಅಕ್ಟೋಬರ್ 2: ವಿದೇಶದ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿ ಇದ್ದರೂ ಭಾರತದಲ್ಲಿ ಹೆಚ್ಚಳ ಆಗಿದೆ. ಇಂದು ಗಾಂಧಿ ಜಯಂತಿ ದಿನದಂದು ಚಿನ್ನದ ಬೆಲೆ ಗ್ರಾಮ್​ಗೆ 50 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿದಿದೆ. ಅಂತಾರಾಷ್ಟ್ರೀಯವಾಗಿ ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಕೆಲವೆಡೆ ತುಸು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,000 ರೂ
  • ಚೆನ್ನೈ: 71,000 ರೂ
  • ಮುಂಬೈ: 71,000 ರೂ
  • ದೆಹಲಿ: 71,150 ರೂ
  • ಕೋಲ್ಕತಾ: 71,000 ರೂ
  • ಕೇರಳ: 71,000 ರೂ
  • ಅಹ್ಮದಾಬಾದ್: 71,050 ರೂ
  • ಜೈಪುರ್: 71,150 ರೂ
  • ಲಕ್ನೋ: 71,150 ರೂ
  • ಭುವನೇಶ್ವರ್: 71,000 ರೂ

ಇದನ್ನೂ ಓದಿ: Petrol Diesel Price on October O2: ಮಹಾರಾಷ್ಟ್ರ, ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (70,120 ರುಪಾಯಿ)
  • ದುಬೈ: 2,982.50 ಡಿರಾಮ್ (68,110 ರುಪಾಯಿ)
  • ಅಮೆರಿಕ: 800 ಡಾಲರ್ (67,100 ರುಪಾಯಿ)
  • ಸಿಂಗಾಪುರ: 1,070 ಸಿಂಗಾಪುರ್ ಡಾಲರ್ (69,740 ರುಪಾಯಿ)
  • ಕತಾರ್: 3,015 ಕತಾರಿ ರಿಯಾಲ್ (69,370 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,180 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (69,060 ರುಪಾಯಿ)
  • ಕುವೇತ್: 242.70 ಕುವೇತಿ ದಿನಾರ್ (66,610 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,000 ರೂ
  • ಚೆನ್ನೈ: 10,100 ರೂ
  • ಮುಂಬೈ: 9,500 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us