ಬೆಂಗಳೂರು, ಅಕ್ಟೋಬರ್ 30: ಒಂದೆಡೆ ಚಿನ್ನದ ಬೆಲೆ ಸತತವಾಗಿ ಏರುತ್ತಿದ್ದರೆ ಬೆಳ್ಳಿ ಬೆಲೆ (Gold and silver Rates) ತುಸು ತಗ್ಗಿದೆ. ಆದರೆ, ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನ ದುಬಾರಿಯಾಗುತ್ತಿದೆ. ಇಸ್ರೇಲ್ ಯುದ್ಧವು ಹೂಡಿಕೆದಾರರನ್ನು ಚಿನ್ನದತ್ತ ಆಕರ್ಷಿಸುವಂತೆ ಮಾಡಿದೆ. ಷೇರು ಮಾರುಕಟ್ಟೆಯೂ ಸತತವಾಗಿ ಕುಸಿಯುತ್ತಿದ್ದು, ಅಲ್ಲಿಂದ ಹೂಡಿಕೆದಾರರು ಚಿನ್ನ ಮತ್ತು ಡಾಲರ್ನತ್ತ ಹಣ ಹಾಕುತ್ತಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,410 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,630 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,460 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,410 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,425 ರುಪಾಯಿಯಲ್ಲಿ ಇದೆ.
ಇದನ್ನೂ ಓದಿ: Onion Shocker: ಈರುಳ್ಳಿ ಬೆಲೆ ಏರಿಕೆ ತಡೆಯಲು ಸರ್ಕಾರ ಕ್ರಮ; ಕನಿಷ್ಠ ರಫ್ತು ದರ ನಿಗದಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ