ಬೆಂಗಳೂರು, ಅಕ್ಟೋಬರ್ 31: ಸತತ ಏರಿಕೆಗಳ ಬಳಿಕ ಚಿನ್ನದ ಬೆಲೆ (Gold and silver Rates) ತುಸು ತಗ್ಗಿದೆ. ಬೆಳ್ಳಿ ಬೆಲೆ ಏರಿದೆ. ಭಾರತ ಹಾಗೂ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆಗೊಂಡಿದೆ. ಇಸ್ರೇಲ್ ಯುದ್ಧ ಶುರುವಾದಾಗಿನಿಂದ ಚಿನ್ನದ ಬೆಲೆ ಇಳಿಕೆ ಕಂಡ ಕೆಲವೇ ದಿನಗಳಲ್ಲಿ ಇಂದೂ ಒಂದು. ಈ ಇಳಿಕೆ ಈ ವಾರ ಇನ್ನಷ್ಟು ದಿನ ಮುಂದುವರಿಯುತ್ತದಾ ಗೊತ್ತಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,560 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: India Gold Reserves: ಭಾರತದ ಫಾರೆಕ್ಸ್ ನಿಧಿಯಲ್ಲಿ ಚಿನ್ನದ ಸಂಗ್ರಹ 799 ಟನ್; ಬೇರೆ ದೇಶಗಳಲ್ಲಿ ಎಷ್ಟಿವೆ ಚಿನ್ನ?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:00 am, Tue, 31 October 23