Gold Silver Price on 05 October: ಚಿನ್ನದ ಬೆಲೆಯಲ್ಲಿ ತುಸು ಏರುಪೇರು; ಬೆಳ್ಳಿ ಇನ್ನಷ್ಟು ಅಗ್ಗ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ

Bullion Market 2023, October 5th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 52,590 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 57,370 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 70.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 52,590 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 05 October: ಚಿನ್ನದ ಬೆಲೆಯಲ್ಲಿ ತುಸು ಏರುಪೇರು; ಬೆಳ್ಳಿ ಇನ್ನಷ್ಟು ಅಗ್ಗ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Oct 05, 2023 | 5:00 AM

ಬೆಂಗಳೂರು, ಅಕ್ಟೋಬರ್ 05: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಇಳಿಕೆ ಇನ್ನಷ್ಟು ಮುಂದುವರಿದಿದೆ. ಚಿನ್ನದ ಬೆಲೆಯಲ್ಲಿ ಅಲ್ಪ ಏರುಪೇರುಗಳಾಗಿವೆ. ಬೆಳ್ಳಿ ಬೆಲೆ ಹೆಚ್ಚಿನ ಮಟ್ಟದಲ್ಲಿ ಇಳಿದಿದೆ. ಸಿಂಗಾಪುರದಂಥ ಕೆಲ ದೇಶಗಳಲ್ಲಿ ಚಿನ್ನ ತುಸು ಹೆಚ್ಚಿದೆ. ಉಳಿದ ಕಡೆ ಅಲ್ಪಮಟದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಹಬ್ಬದ ಋತು ಇದ್ದರೂ ಚಿನ್ನದ ಬೆಲೆ ಕುಸಿತ ನಿಲ್ಲುತ್ತಿಲ್ಲ. ಅಮೆರಿಕದ ಬಾಂಡ್​ಗಳ ಮೇಲೆ ಹೂಡಿಕೆದಾರರ ಚಿತ್ತ ನೆಟ್ಟಿರುವುದರಿಂದ ಚಿನ್ನಕ್ಕೆ ಬೇಡಿಕೆ ನಿರೀಕ್ಷೆ ಮೀರಿ ಕಡಿಮೆ ಆಗಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 52,590 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 53,370 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,070 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 52,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 5ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 707 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52,590 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,370 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 690 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 52,590 ರೂ
  • ಚೆನ್ನೈ: 52,850 ರೂ
  • ಮುಂಬೈ: 52,590 ರೂ
  • ದೆಹಲಿ: 52,750 ರೂ
  • ಕೋಲ್ಕತಾ: 52,590 ರೂ
  • ಕೇರಳ: 52,590 ರೂ
  • ಅಹ್ಮದಾಬಾದ್: 52,650 ರೂ
  • ಜೈಪುರ್: 52,750 ರೂ
  • ಲಕ್ನೋ: 52,750 ರೂ
  • ಭುವನೇಶ್ವರ್: 52,590 ರೂ

ಇದನ್ನೂ ಓದಿ: ರಾಷ್ಟ್ರೀಯ ಅರಿಶಿನ ಮಂಡಳಿ ಸ್ಥಾಪನೆಗೆ ಸರ್ಕಾರದಿಂದ ಅಧಿಸೂಚನೆ; ಈ ಮಂಡಳಿ ಯಾಕೆ ಮುಖ್ಯ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,770 ರಿಂಗಿಟ್ (48,734 ರುಪಾಯಿ)
  • ದುಬೈ: 2,042.50 ಡಿರಾಮ್ (46,289 ರುಪಾಯಿ)
  • ಅಮೆರಿಕ: 565 ಡಾಲರ್ (47,032 ರುಪಾಯಿ)
  • ಸಿಂಗಾಪುರ: 778 ಸಿಂಗಾಪುರ್ ಡಾಲರ್ (47,215 ರುಪಾಯಿ)
  • ಕತಾರ್: 2,110 ಕತಾರಿ ರಿಯಾಲ್ (48,159 ರೂ)
  • ಓಮನ್: 223.50 ಒಮಾನಿ ರಿಯಾಲ್ (48,320 ರುಪಾಯಿ)
  • ಕುವೇತ್: 176.50 ಕುವೇತಿ ದಿನಾರ್ (47,512 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 6,900 ರೂ
  • ಚೆನ್ನೈ: 7,310 ರೂ
  • ಮುಂಬೈ: 7,070 ರೂ
  • ದೆಹಲಿ: 7,070 ರೂ
  • ಕೋಲ್ಕತಾ: 7,070 ರೂ
  • ಕೇರಳ: 7,310 ರೂ
  • ಅಹ್ಮದಾಬಾದ್: 7,070 ರೂ
  • ಜೈಪುರ್: 7,070 ರೂ
  • ಲಕ್ನೋ: 7,070 ರೂ
  • ಭುವನೇಶ್ವರ್: 7,310 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ