ಬೆಂಗಳೂರು, ಅಕ್ಟೋಬರ್ 05: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಇಳಿಕೆ ಇನ್ನಷ್ಟು ಮುಂದುವರಿದಿದೆ. ಚಿನ್ನದ ಬೆಲೆಯಲ್ಲಿ ಅಲ್ಪ ಏರುಪೇರುಗಳಾಗಿವೆ. ಬೆಳ್ಳಿ ಬೆಲೆ ಹೆಚ್ಚಿನ ಮಟ್ಟದಲ್ಲಿ ಇಳಿದಿದೆ. ಸಿಂಗಾಪುರದಂಥ ಕೆಲ ದೇಶಗಳಲ್ಲಿ ಚಿನ್ನ ತುಸು ಹೆಚ್ಚಿದೆ. ಉಳಿದ ಕಡೆ ಅಲ್ಪಮಟದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಹಬ್ಬದ ಋತು ಇದ್ದರೂ ಚಿನ್ನದ ಬೆಲೆ ಕುಸಿತ ನಿಲ್ಲುತ್ತಿಲ್ಲ. ಅಮೆರಿಕದ ಬಾಂಡ್ಗಳ ಮೇಲೆ ಹೂಡಿಕೆದಾರರ ಚಿತ್ತ ನೆಟ್ಟಿರುವುದರಿಂದ ಚಿನ್ನಕ್ಕೆ ಬೇಡಿಕೆ ನಿರೀಕ್ಷೆ ಮೀರಿ ಕಡಿಮೆ ಆಗಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 52,590 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 53,370 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,070 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 52,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 6,900 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ರಾಷ್ಟ್ರೀಯ ಅರಿಶಿನ ಮಂಡಳಿ ಸ್ಥಾಪನೆಗೆ ಸರ್ಕಾರದಿಂದ ಅಧಿಸೂಚನೆ; ಈ ಮಂಡಳಿ ಯಾಕೆ ಮುಖ್ಯ? ಇಲ್ಲಿದೆ ಡೀಟೇಲ್ಸ್
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ