ಬೆಂಗಳೂರು, ಅಕ್ಟೋಬರ್ 05: ಚಿನ್ನದ ಬೆಲೆಯ (Gold and silver Rates) ಇಳಿಕೆ ಮುಂದುವರಿದಿದೆ. ಬೆಳ್ಳಿ ಬೆಲೆ ಏರಿದೆ. ಕೆಲ ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ತುಸು ಹೆಚ್ಚಳವಾದರೂ ಭಾರತದಲ್ಲಿ ಬೆಲೆ ಕಡಿಮೆ ಆಗಿದೆ. ಇಂದು ಚಿನ್ನದ ಬೆಲೆ ಏರುಗತಿಗೆ ಬರುವ ನಿರೀಕ್ಷೆ ಇದೆ. ನಿನ್ನೆ ಸಿಂಗಾಪುರದಂಥ ಕೆಲ ದೇಶಗಳಲ್ಲಿ ಚಿನ್ನದ ಬೆಲೆ ತುಸು ಹೆಚ್ಚಿತ್ತು. ಸತತ ಎರಡನೇ ಬಾರಿ ಅದು ಹೆಚ್ಚಳಗೊಂಡಿದೆ. ಚಿನ್ನದ ಮೇಲೆ ಹೂಡಿಕೆ ಮಾಡಬೇಕೆನ್ನುವವರು ಇನ್ನಷ್ಟು ಇಳಿಕೆಗೆ ಕಾಯುವುದು ತರವಲ್ಲ ಎನ್ನಬಹುದು. ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 52,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 57,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,110 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 52,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 6,900 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 05 Oct: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ