ಬೆಂಗಳೂರು, ಅಕ್ಟೋಬರ್ 6: ಚಿನ್ನದ ಬೆಲೆ ಸತತ ಎರಡನೇ ದಿನ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆಯಲ್ಲಿ ಗ್ರಾಮ್ಗೆ 2 ರೂ ಏರಿಕೆ ಆಗಿದೆ. 22 ಕ್ಯಾರಟ್ನ ಆಭರಣ ಚಿನ್ನದ ಬೆಲೆ ಗ್ರಾಮ್ಗೆ 7,120 ರೂ ಇದೆ. 18 ಕ್ಯಾರಟ್ನ ಚಿನ್ನದ ಬೆಲೆ 5,826 ರೂ ಇದೆ. ವಿದೇಶಗಳಲ್ಲಿ ಇಂದು ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆ 95 ರೂ ಇದ್ದದ್ದು 97 ರೂಗೆ ಏರಿಕೆ ಆಗಿದೆ. ಚೆನ್ನೈ ಮೊದಲಾದೆಡೆ 101 ರೂ ಇದ್ದದ್ದು 103 ರೂಗೆ ಏರಿದೆ. ಬೆಂಗಳೂರಿನಲ್ಲಿ 92 ರೂ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 71,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 77,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 71,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,200 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಹೊರದೇಶದಿಂದ ಒಬ್ಬ ವ್ಯಕ್ತಿ ಎಷ್ಟು ಚಿನ್ನ ತರಬಹುದು? ಎಷ್ಟು ತೆರಿಗೆ ಕಟ್ಟಬೇಕು? ಇಲ್ಲಿದೆ ಡೀಟೇಲ್ಸ್
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ