ಬೆಂಗಳೂರು, ಅಕ್ಟೋಬರ್ 09: ಇಸ್ರೇಲ್ ಮತ್ತು ಹಮಾಸ್ ಯುದ್ಧದ ಪರಿಣಾಮ ಚಿನ್ನ ಮತ್ತು ಬೆಳ್ಳಿ (Gold and silver Rates) ಮೇಲೆ ಬೀಳುತ್ತಿದೆ. ಈ ಎರಡೂ ಲೋಹಗಳ ಬೆಲೆಯಲ್ಲಿ ಸಾಕಷ್ಟು ಏರಿಕೆ ಆಗುತ್ತಿದೆ. ಕಳೆದ ಎರಡು ವಾರದಿಂದ ಬಹುತೇಕ ಇಳಿಮುಖವಾಗುತ್ತಿದ್ದ ಚಿನ್ನದ ಬೆಲೆ ಹೆಚ್ಚಳವಾಗತೊಡಗಿದೆ. ಯುದ್ದದ ಪರಿಣಾಮ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ನಿರೀಕ್ಷಿಸಬಹುದು ಎಂದು ಕೆಲ ತಜ್ಞರು ಹೇಳುತ್ತಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 53,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 57,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,210 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 53,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 6,900 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಇಸ್ರೇಲ್-ಹಮಾಸ್ ಯುದ್ಧ; ದುಬಾರಿಯಾಗುತ್ತಾ ಚಿನ್ನ?; ಭಾರತದ ಷೇರುಪೇಟೆ ಮೇಲೇನು ಪರಿಣಾಮ?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ