ಬೆಂಗಳೂರು, ಸೆಪ್ಟಂಬರ್ 10: ಚಿನ್ನದ ಬೆಲೆ ಇಂದು ಮಂಗಳವಾರ ತುಸು ತಗ್ಗಿದೆ. ನಿನ್ನೆ ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಇಳಿಕೆ ಆಗಿತ್ತು. ಇದು ಭಾರತದ ಮಾರುಕಟ್ಟೆಯಲ್ಲಿ ಪ್ರತಿಫಲಿಸಬಹುದು ಎನ್ನುವ ನಿರೀಕ್ಷೆ ನಿಜವಾಗಿದೆ. ಇಂದು ವಿದೇಶೀ ಚಿನಿವಾರಪೇಟೆಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಗ್ರಾಮ್ಗೆ 3 ರೂನಷ್ಟು ಮಾತ್ರವೇ ಇಳಿಕೆ ಆಗಿರುವುದು. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,770 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,770 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,350 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 10: ಆಂಧ್ರಪ್ರದೇಶ, ಹರ್ಯಾಣದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ