Gold Silver Price on 11 September: ಚಿನ್ನ, ಬೆಳ್ಳಿ ಬೆಲೆ ತುಸು ಇಳಿಕೆ; ಕೊಳ್ಳಲು ಒಳ್ಳೆಯ ಅವಕಾಶ ಇನ್ನೂ ಇದೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, September 11th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,840 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,850 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 11 September: ಚಿನ್ನ, ಬೆಳ್ಳಿ ಬೆಲೆ ತುಸು ಇಳಿಕೆ; ಕೊಳ್ಳಲು ಒಳ್ಳೆಯ ಅವಕಾಶ ಇನ್ನೂ ಇದೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Sep 11, 2023 | 5:00 AM

ಬೆಂಗಳೂರು, ಸೆಪ್ಟೆಂಬರ್ 11: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ವಾರಾಂತ್ಯದಲ್ಲಿ ತುಸು ಇಳಿಕೆ ಕಂಡಿದ್ದು, ಈ ವಾರ ಯಾವ ದಿಕ್ಕಿನಲ್ಲಿ ಸಾಗುತ್ತವೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ಹಲವು ತಿಂಗಳುಗಳಿಂದ ಈ ಎರಡೂ ಲೋಹದ ಬೆಲೆಯಲ್ಲಿ ಅಷ್ಟೇನೂ ದೊಡ್ಡ ಮಟ್ಟದ ಏರಿಕೆ ಆಗಿಲ್ಲ. ಡಾಲರ್ ಮೌಲ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೆಚ್ಚಳ ನಿರೀಕ್ಷಿತ ರೀತಿಯಲ್ಲಿ ಆಗುತ್ತಿಲ್ಲ. ಚಿನ್ನ ಖರೀದಿಸಬೇಕೆನ್ನುವವರಿಗೆ ಒಳ್ಳೆಯ ಅವಕಾಶ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 11ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,850 ರೂ
  • ಚೆನ್ನೈ: 55,100 ರೂ
  • ಮುಂಬೈ: 54,850 ರೂ
  • ದೆಹಲಿ: 55,000 ರೂ
  • ಕೋಲ್ಕತಾ: 54,850 ರೂ
  • ಕೇರಳ: 54,850 ರೂ
  • ಅಹ್ಮದಾಬಾದ್: 54,900 ರೂ
  • ಜೈಪುರ್: 55,000 ರೂ
  • ಲಕ್ನೋ: 55,000 ರೂ
  • ಭುವನೇಶ್ವರ್: 54,850 ರೂ

ಇದನ್ನೂ ಓದಿ: ಚೀನಾದ ಮಹತ್ವಾಕಾಂಕ್ಷಿ ಸಿಲ್ಕ್ ರೋಡ್ ಯೋಜನೆಗೆ ಎದುರಾಗಿ ಭಾರತದಿಂದ ಪರ್ಯಾಯ ಎಕನಾಮಿಕ್ ಕಾರಿಡಾರ್ ಪ್ರಾಜೆಕ್ಟ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,602 ರುಪಾಯಿ)
  • ದುಬೈ: 2152.50 ಡಿರಾಮ್ (48,659 ರುಪಾಯಿ)
  • ಅಮೆರಿಕ: 590 ಡಾಲರ್ (48,988 ರುಪಾಯಿ)
  • ಸಿಂಗಾಪುರ: 815 ಸಿಂಗಾಪುರ್ ಡಾಲರ್ (49,581 ರುಪಾಯಿ)
  • ಕತಾರ್: 2,220 ಕತಾರಿ ರಿಯಾಲ್ (50,568 ರೂ)
  • ಓಮನ್: 235 ಒಮಾನಿ ರಿಯಾಲ್ (50,684 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,913 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,700 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us