ಬೆಂಗಳೂರು, ಸೆಪ್ಟಂಬರ್ 11: ಭಾರತದಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಕೆ ಆಗಿದೆ. ಆಭರಣ ಮತ್ತು ಅಪರಂಜಿ ಎರಡೂ ಚಿನ್ನದ ಬೆಲೆ ಗ್ರಾಮ್ಗೆ 1 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಇಂದು ಬುಧವಾರ ಹೆಚ್ಚಳವಾಗಿದೆ. ನಾಳೆ ಗುರುವಾರ ಇದು ಭಾರತದ ಚಿನಿವಾರ ಮಾರುಕಟ್ಟೆಯಲ್ಲಿ ಪ್ರತಿಫಲಿಸಬಹುದು. ಇನ್ನು, ಬೆಳ್ಳಿ ಬೆಲೆಯಲ್ಲಿ ಗ್ರಾಮ್ಗೆ ಒಂದೂವರೆ ರೂನಷ್ಟು ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,760 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,760 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 11: ಗೋವಾ ಹಾಗೂ ಜಾರ್ಖಂಡ್ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ