ಬೆಂಗಳೂರು, ಸೆಪ್ಟಂಬರ್ 13: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ವಿದೇಶಗಳಲ್ಲಿ ತೀವ್ರ ಹೆಚ್ಚಳವಾಗಿದೆ. ಆದರೆ, ಭಾರತದಲ್ಲಿ ಈ ಎರಡೂ ಲೋಹಗಳ ಬೆಲೆ ಇಳಿದಿದೆ. ಇಂದು ಮಧ್ಯಾಹ್ನದೊಳಗೆ ಭಾರತದಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಇದೆ. ಎಂಸಿಎಕ್ಸ್ ಬೆಲೆ ಈಗಾಗಲೇ ಜಂಪ್ ಆಗಿದೆ. ಗ್ರಾಮ್ಗೆ 14 ರೂನಷ್ಟು ಏರಿಕೆ ಆಗಬಹುದು. ಆದರೆ, ಇಂದು ಶುಕ್ರವಾರ ಬೆಳಗ್ಗೆ 10 ಗಂಟೆಯ ವಹಿವಾಟಿನಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಕಡಿಮೆ ಆಗಿರುವುದು ತಿಳಿದುಬಂದಿದೆ. ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ಅಮೆರಿಕದಲ್ಲಿ ಬಡ್ಡಿದರ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ತೀವ್ರ ಏರಿಕೆ ಕಾಣವ ಸಂಭವವಂತೂ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,040 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,140 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,040 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,390 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 13: ಬಿಹಾರ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 10:23 am, Fri, 13 September 24