AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 14 September: ಭರ್ಜರಿಯಾಗಿ ಇಳಿದ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, September 14th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 14 September: ಭರ್ಜರಿಯಾಗಿ ಇಳಿದ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 14, 2023 | 4:53 AM

Share

ಬೆಂಗಳೂರು, ಸೆಪ್ಟೆಂಬರ್ 14: ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಗಣನೀಯವಾಗಿ ಇಳಿದಿವೆ. ಅಮೆರಿಕದ ಫೆಡರಲ್ ಬ್ಯಾಂಕ್ ಹಣದುಬ್ಬರ ನಿಯಂತ್ರಣಕ್ಕೆ ಬಡ್ಡಿದರ ಏರಿಕೆ ಮಾಡುತ್ತದೋ ಇಲ್ಲವೋ ಎಂಬ ಅನುಮಾನಗಳ ಮಧ್ಯೆ ಚಿನ್ನಕ್ಕಿರುವ ಬೇಡಿಕೆ ತುಸು ಕಡಿಮೆ ಆಗಿದೆ. ಪರಿಣಾಮವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಅಮೆರಿಕದ ಸೆಂಟ್ರಲ್ ಬ್ಯಾಂಕ್​ನಿಂದ ಹೊಸ ಬಡ್ಡಿದರ ಪ್ರಕಟವಾಗುವವರೆಗೂ ಚಿನ್ನದ ಬೆಲೆಯ ಹೊಯ್ದಾಟ ಹೀಗೆಯೇ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 14ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 732.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,500 ರೂ
  • ಚೆನ್ನೈ: 54,800 ರೂ
  • ಮುಂಬೈ: 54,500 ರೂ
  • ದೆಹಲಿ: 54,650 ರೂ
  • ಕೋಲ್ಕತಾ: 54,500 ರೂ
  • ಕೇರಳ: 54,500 ರೂ
  • ಅಹ್ಮದಾಬಾದ್: 54,550 ರೂ
  • ಜೈಪುರ್: 54,650 ರೂ
  • ಲಕ್ನೋ: 54,650 ರೂ
  • ಭುವನೇಶ್ವರ್: 54,500 ರೂ

ಇದನ್ನೂ ಓದಿ:

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,528 ರುಪಾಯಿ)
  • ದುಬೈ: 2142.50 ಡಿರಾಮ್ (48,423 ರುಪಾಯಿ)
  • ಅಮೆರಿಕ: 590 ಡಾಲರ್ (48,941 ರುಪಾಯಿ)
  • ಸಿಂಗಾಪುರ: 809 ಸಿಂಗಾಪುರ್ ಡಾಲರ್ (49,295 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (50,400 ರೂ)
  • ಓಮನ್: 234 ಒಮಾನಿ ರಿಯಾಲ್ (50,430 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,471 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,325 ರೂ
  • ಚೆನ್ನೈ: 7,700 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ