Gold Silver Price on 15 September: ದುಬೈ ಮೊದಲಾದೆಡೆ ಚಿನ್ನ ಅಗ್ಗ; ಭಾರತ ಹಾಗೂ ಬಹುತೇಕ ಕಡೆ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, September 15th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 15 September: ದುಬೈ ಮೊದಲಾದೆಡೆ ಚಿನ್ನ ಅಗ್ಗ; ಭಾರತ ಹಾಗೂ ಬಹುತೇಕ ಕಡೆ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Sep 15, 2023 | 5:00 AM

ಬೆಂಗಳೂರು, ಸೆಪ್ಟೆಂಬರ್ 15: ದುಬೈ ಇತ್ಯಾದಿ ಕೆಲ ಕಡೆ ಹೊರತುಪಡಿಸಿ ಉಳಿದ ಭಾಗದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಯಥಾಸ್ಥಿತಿಯಲ್ಲಿವೆ. ಭಾರತದೆಲ್ಲೆಡೆ ಈ ಎರಡೂ ಲೋಹಗಳ ಬೆಲೆಯಲ್ಲಿ ವ್ಯತ್ಯಯಗಳಾಗಿಲ್ಲ. ಅಮೆರಿಕದಲ್ಲಿ ಹಣದುಬ್ಬರ ಏರಿಕೆಯಾಗಿದ್ದು ಇದೀಗ ಎಲ್ಲರ ಚಿತ್ತ ಅಲ್ಲಿನ ಫೆಡರಲ್ ಬ್ಯಾಂಕ್ ಬಡ್ಡಿದರ ಏರಿಸುತ್ತದೋ ಇಲ್ಲವೋ ಎಂಬುದರ ಮೇಲೆ ನೆಟ್ಟಿದೆ. ಬಡ್ಡಿದರ ಕಡಿಮೆಯಾಗುವ ಸಾಧ್ಯತೆ ಇಲ್ಲದ್ದರಿಂದ ಮುಂದಿನ ಕೆಲ ದಿನಗಳು ಚಿನ್ನದ ಮೇಲಿನ ಹೂಡಿಕೆ ಕಡಿಮೆ ಆಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 15ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 732.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,500 ರೂ
  • ಚೆನ್ನೈ: 54,800 ರೂ
  • ಮುಂಬೈ: 54,500 ರೂ
  • ದೆಹಲಿ: 54,650 ರೂ
  • ಕೋಲ್ಕತಾ: 54,500 ರೂ
  • ಕೇರಳ: 54,500 ರೂ
  • ಅಹ್ಮದಾಬಾದ್: 54,550 ರೂ
  • ಜೈಪುರ್: 54,650 ರೂ
  • ಲಕ್ನೋ: 54,650 ರೂ
  • ಭುವನೇಶ್ವರ್: 54,500 ರೂ

ಇದನ್ನೂ ಓದಿ:

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,528 ರುಪಾಯಿ)
  • ದುಬೈ: 2137.50 ಡಿರಾಮ್ (48,294 ರುಪಾಯಿ)
  • ಅಮೆರಿಕ: 590 ಡಾಲರ್ (48,968 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,290 ರುಪಾಯಿ)
  • ಕತಾರ್: 2,210 ಕತಾರಿ ರಿಯಾಲ್ (50,307 ರೂ)
  • ಓಮನ್: 233.50 ಒಮಾನಿ ರಿಯಾಲ್ (50,336 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,466 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,325 ರೂ
  • ಚೆನ್ನೈ: 7,700 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us