Gold Silver Price on 16th September: ಚಿನ್ನ, ಬೆಳ್ಳಿ ಬೆಲೆ ಇಂದು ಕೂಡ ಏರಿಕೆ; ಆಭರಣ ಚಿನ್ನ 6,900 ರೂ ಸಮೀಪಕ್ಕೆ

Bullion Market 2024 September 16th: ಅಪರಂಜಿ ಚಿನ್ನದ ಬೆಲೆ ಭಾರತದಲ್ಲಿ ಇಂದು 7,505 ರೂ ಆಗಿದೆ. ಆಭರಣ ಚಿನ್ನದ ಬೆಲೆ 6,900 ರೂ ಸಮೀಪಕ್ಕೆ ಬಂದಿದೆ. ಸದ್ಯ 6,880 ರೂಗೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 86 ರೂಗೆ ಏರಿದರೆ, ಬೇರೆ ಬೇರೆ ಕಡೆ 93 ಮತ್ತು 98 ರೂ ದರ ಇದೆ.

Gold Silver Price on 16th September: ಚಿನ್ನ, ಬೆಳ್ಳಿ ಬೆಲೆ ಇಂದು ಕೂಡ ಏರಿಕೆ; ಆಭರಣ ಚಿನ್ನ 6,900 ರೂ ಸಮೀಪಕ್ಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2024 | 10:41 AM

ಬೆಂಗಳೂರು, ಸೆಪ್ಟಂಬರ್ 16: ಇಂದು ಸೋಮವಾರ ಭಾರತದ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಒಂದು ರೂ ಜಾಸ್ತಿಯಾಗಿದೆ. ಕಳೆದ ಎರಡು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಒಟ್ಟಾರೆಯಾಗಿ ಏರಿಕೆ ಆಗಿದೆ. ವಿದೇಶಗಳಲ್ಲಿ ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಯವಾಗಿಲ್ಲ. ಬಹುತೇಕ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಕುವೇತ್ ಮೊದಲಾದ ಕೆಲವೆಡೆ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,800 ರೂ
  • ಚೆನ್ನೈ: 68,800 ರೂ
  • ಮುಂಬೈ: 68,800 ರೂ
  • ದೆಹಲಿ: 68,950 ರೂ
  • ಕೋಲ್ಕತಾ: 68,800 ರೂ
  • ಕೇರಳ: 68,800 ರೂ
  • ಅಹ್ಮದಾಬಾದ್: 68,850 ರೂ
  • ಜೈಪುರ್: 68,950 ರೂ
  • ಲಕ್ನೋ: 68,950 ರೂ
  • ಭುವನೇಶ್ವರ್: 68,800 ರೂ

ಇದನ್ನೂ ಓದಿ: Petrol Diesel Price on September 16: ಅಂಡಮಾನ್​ ನಿಕೋಬಾರ್​ನಲ್ಲಿ ಪೆಟ್ರೋಲ್ ಬೆಲೆ ಅಗ್ಗ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (68,190 ರುಪಾಯಿ)
  • ದುಬೈ: 2,890 ಡಿರಾಮ್ (66,030 ರುಪಾಯಿ)
  • ಅಮೆರಿಕ: 785 ಡಾಲರ್ (65,870 ರುಪಾಯಿ)
  • ಸಿಂಗಾಪುರ: 1,046 ಸಿಂಗಾಪುರ್ ಡಾಲರ್ (67,670 ರುಪಾಯಿ)
  • ಕತಾರ್: 2,930 ಕತಾರಿ ರಿಯಾಲ್ (67,440 ರೂ)
  • ಸೌದಿ ಅರೇಬಿಯಾ: 2,940 ಸೌದಿ ರಿಯಾಲ್ (65,730 ರುಪಾಯಿ)
  • ಓಮನ್: 308 ಒಮಾನಿ ರಿಯಾಲ್ (67,130 ರುಪಾಯಿ)
  • ಕುವೇತ್: 233.90 ಕುವೇತಿ ದಿನಾರ್ (64,300 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,600 ರೂ
  • ಚೆನ್ನೈ: 9,800 ರೂ
  • ಮುಂಬೈ: 9,300 ರೂ
  • ದೆಹಲಿ: 9,300 ರೂ
  • ಕೋಲ್ಕತಾ: 9,300 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 9,300 ರೂ
  • ಜೈಪುರ್: 9,300 ರೂ
  • ಲಕ್ನೋ: 9,300 ರೂ
  • ಭುವನೇಶ್ವರ್: 9,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?