AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 19 September: ಗಣೇಶ ಹಬ್ಬದ ಬಳಿಕವೂ ಚಿನ್ನದ ಬೆಲೆ ಏರಿಕೆ; ಬೆಳ್ಳಿ ತುಸು ಕಡಿಮೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ

Bullion Market 2023, September 19th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,050 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19 September: ಗಣೇಶ ಹಬ್ಬದ ಬಳಿಕವೂ ಚಿನ್ನದ ಬೆಲೆ ಏರಿಕೆ; ಬೆಳ್ಳಿ ತುಸು ಕಡಿಮೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 19, 2023 | 5:06 AM

Share

ಬೆಂಗಳೂರು, ಸೆಪ್ಟೆಂಬರ್ 19: ಇಂದು ಚಿನ್ನದ ಬೆಲೆ ಏರಿಕೆ (Gold Rates) ಮುಂದುವರಿದಿದೆ. ಬೆಳ್ಳಿ ಬೆಲೆ ತುಸು ಕಡಿಮೆ ಆಗಿದೆಯಾದರೂ ಹಳದಿ ಲೋಹಕ್ಕೆ ಬೇಡಿಕೆ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಂಗೆ 15 ರುಪಾಯಿಗೂ ಹೆಚ್ಚಿದೆ. ಬೆಳ್ಳಿ ಬೆಂಗಳೂರಿನಲ್ಲಿ ಮಾತ್ರವೇ ತುಸು ಹೆಚ್ಚಾಗಿದ್ದು, ಬೇರೆಡೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 19ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,050 ರೂ
  • ಚೆನ್ನೈ: 55,400 ರೂ
  • ಮುಂಬೈ: 55,050 ರೂ
  • ದೆಹಲಿ: 55,200 ರೂ
  • ಕೋಲ್ಕತಾ: 55,050 ರೂ
  • ಕೇರಳ: 55,050 ರೂ
  • ಅಹ್ಮದಾಬಾದ್: 55,100 ರೂ
  • ಜೈಪುರ್: 55,200 ರೂ
  • ಲಕ್ನೋ: 55,200 ರೂ
  • ಭುವನೇಶ್ವರ್: 55,050 ರೂ

ಇದನ್ನೂ ಓದಿ: ನೆಲಮಂಗಲ ಬಳಿ ಭಾರತದ ಅತಿದೊಡ್ಡ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್ ಸ್ಥಾಪನೆಗೆ ಒಪ್ಪಂದ; ಏನಿದರ ವಿಶೇಷತೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,630 ರುಪಾಯಿ)
  • ದುಬೈ: 2160 ಡಿರಾಮ್ (48,986 ರುಪಾಯಿ)
  • ಅಮೆರಿಕ: 590 ಡಾಲರ್ (49,145 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,872 ರುಪಾಯಿ)
  • ಕತಾರ್: 2,235 ಕತಾರಿ ರಿಯಾಲ್ (51,073 ರೂ)
  • ಓಮನ್: 235.50 ಒಮಾನಿ ರಿಯಾಲ್ (50,950 ರುಪಾಯಿ)
  • ಕುವೇತ್: 186 ಕುವೇತಿ ದಿನಾರ್ (50,152 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​