ಬೆಂಗಳೂರು, ಸೆಪ್ಟೆಂಬರ್ 19: ಇಂದು ಚಿನ್ನದ ಬೆಲೆ ಏರಿಕೆ (Gold Rates) ಮುಂದುವರಿದಿದೆ. ಬೆಳ್ಳಿ ಬೆಲೆ ತುಸು ಕಡಿಮೆ ಆಗಿದೆಯಾದರೂ ಹಳದಿ ಲೋಹಕ್ಕೆ ಬೇಡಿಕೆ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಂಗೆ 15 ರುಪಾಯಿಗೂ ಹೆಚ್ಚಿದೆ. ಬೆಳ್ಳಿ ಬೆಂಗಳೂರಿನಲ್ಲಿ ಮಾತ್ರವೇ ತುಸು ಹೆಚ್ಚಾಗಿದ್ದು, ಬೇರೆಡೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ನೆಲಮಂಗಲ ಬಳಿ ಭಾರತದ ಅತಿದೊಡ್ಡ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್ ಸ್ಥಾಪನೆಗೆ ಒಪ್ಪಂದ; ಏನಿದರ ವಿಶೇಷತೆ?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ