AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 19th September: ಮತ್ತೆ ಮತ್ತೆ ಕುಸಿತ ಕಾಣುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 September 19th: ಅಮೆರಿಕದಲ್ಲಿ ಬಡ್ಡಿದರ ಇಳಿಕೆಯಾದರೂ ಭಾರತದಲ್ಲಿ ಚಿನ್ನದ ಬೆಲೆ ಏರುವ ಬದಲು ಕುಸಿತ ಕಂಡಿದೆ. ವಿದೇಶಗಳಲ್ಲೂ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,445 ರೂಗೆ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿದೆ.

Gold Silver Price on 19th September: ಮತ್ತೆ ಮತ್ತೆ ಕುಸಿತ ಕಾಣುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 19, 2024 | 10:56 AM

Share

ಬೆಂಗಳೂರು, ಸೆಪ್ಟಂಬರ್ 19: ಅಮೆರಿಕದ ಫೆಡರಲ್ ರಿಸರ್ವ್ ಸಂಸ್ಥೆ ಬ್ಯಾಂಕ್ ಬಡ್ಡಿದರಗಳನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡುವ ನಿರ್ಧಾರ ಮಾಡಿದೆ. ಚಿನ್ನದ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಇದಕ್ಕೆ ವ್ಯತಿರಿಕ್ತವಾಗಿ ಹಳದಿ ಲೋಹದ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25ರಿಂದ 39 ರೂಗಳಷ್ಟು ಇಳಿಕೆ ಆಗಿದೆ. ವಿದೇಶಗಳ ವಿವಿಧ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ವಲ್ಪ ಕಡಿಮೆ ಆಗಿದೆ. ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಬೆಂಗಳೂರಿನಲ್ಲಿ ಮಾತ್ರ 86 ರೂ ಇದ್ದ ಬೆಳ್ಳಿ ಬೆಲೆ 90 ರೂಗೆ ಏರಿದೆ. ಉಳಿದ ಕಡೆ 93 ಮತ್ತು 96 ರೂ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,640 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,250 ರೂ
  • ಚೆನ್ನೈ: 68,250 ರೂ
  • ಮುಂಬೈ: 68,250 ರೂ
  • ದೆಹಲಿ: 68,400 ರೂ
  • ಕೋಲ್ಕತಾ: 68,250 ರೂ
  • ಕೇರಳ: 68,250 ರೂ
  • ಅಹ್ಮದಾಬಾದ್: 68,300 ರೂ
  • ಜೈಪುರ್: 68,400 ರೂ
  • ಲಕ್ನೋ: 68,400 ರೂ
  • ಭುವನೇಶ್ವರ್: 68,250 ರೂ

ಇದನ್ನೂ ಓದಿ: Petrol Diesel Price on September 19: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (68,080 ರುಪಾಯಿ)
  • ದುಬೈ: 2,882.50 ಡಿರಾಮ್ (65,680 ರುಪಾಯಿ)
  • ಅಮೆರಿಕ: 785 ಡಾಲರ್ (65,690 ರುಪಾಯಿ)
  • ಸಿಂಗಾಪುರ: 1,039 ಸಿಂಗಾಪುರ್ ಡಾಲರ್ (67,130 ರುಪಾಯಿ)
  • ಕತಾರ್: 2,920 ಕತಾರಿ ರಿಯಾಲ್ (67,040 ರೂ)
  • ಸೌದಿ ಅರೇಬಿಯಾ: 2,940 ಸೌದಿ ರಿಯಾಲ್ (65,560 ರುಪಾಯಿ)
  • ಓಮನ್: 307.50 ಒಮಾನಿ ರಿಯಾಲ್ (67,840 ರುಪಾಯಿ)
  • ಕುವೇತ್: 233.60 ಕುವೇತಿ ದಿನಾರ್ (64,110 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,000 ರೂ
  • ಚೆನ್ನೈ: 9,600 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,600 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,600 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ