ಬೆಂಗಳೂರು, ಸೆಪ್ಟಂಬರ್ 19: ಅಮೆರಿಕದ ಫೆಡರಲ್ ರಿಸರ್ವ್ ಸಂಸ್ಥೆ ಬ್ಯಾಂಕ್ ಬಡ್ಡಿದರಗಳನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡುವ ನಿರ್ಧಾರ ಮಾಡಿದೆ. ಚಿನ್ನದ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಇದಕ್ಕೆ ವ್ಯತಿರಿಕ್ತವಾಗಿ ಹಳದಿ ಲೋಹದ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 25ರಿಂದ 39 ರೂಗಳಷ್ಟು ಇಳಿಕೆ ಆಗಿದೆ. ವಿದೇಶಗಳ ವಿವಿಧ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ವಲ್ಪ ಕಡಿಮೆ ಆಗಿದೆ. ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ಬೆಂಗಳೂರಿನಲ್ಲಿ ಮಾತ್ರ 86 ರೂ ಇದ್ದ ಬೆಳ್ಳಿ ಬೆಲೆ 90 ರೂಗೆ ಏರಿದೆ. ಉಳಿದ ಕಡೆ 93 ಮತ್ತು 96 ರೂ ಬೆಲೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,000 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 19: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ