AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 01 September: ಇವತ್ತೂ ಕೂಡ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ಬೆಲೆ ಶಾಂತ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 1st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.60 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 01 September: ಇವತ್ತೂ ಕೂಡ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ಬೆಲೆ ಶಾಂತ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 01, 2023 | 5:00 AM

Share

ಬೆಂಗಳೂರು, ಸೆಪ್ಟೆಂಬರ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಸತತವಾಗಿ ಭರ್ಜರಿ ಏರಿಕೆ ಕಂಡಿವೆ. ಭಾರತ ಸೇರಿದಂತೆ ಎಲ್ಲೆಡೆ ಚಿನ್ನದ ಬೆಲೆ ಗಮನಾರ್ಹವಾಗಿ ಹೆಚ್ಚಳವಾಗಿದೆ. ನಿನ್ನೆ ಮೊನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ತಜ್ಞರು ನಿರೀಕ್ಷಿಸಿದಂತೆ ಈ ಏರಿಕೆ ಇನ್ನೂ ದೀರ್ಘಕಾಲ ಮುಂದುವರಿಯುವ ಸಾಧ್ಯತೆ ಇದೆ. ಅಮೆರಿಕದ ಆರ್ಥಿಕತೆ ಬಗ್ಗೆ ಮತ್ತೆ ಸಂಶಯದ ಗೆರೆಗಳು ಮೂಡುತ್ತಿರುವಂತೆಯೇ ಹೂಡಿಕೆದಾರರು ಸುರಕ್ಷತೆಗೆ ಚಿನ್ನದತ್ತ ಮುಗಿಬೀಳುತ್ತಿರುವ ಟ್ರೆಂಡ್ ನಿರೀಕ್ಷೆಯಂತೆ ಈ ವಾರ ಮುಂದುವರಿಯುತ್ತಿದೆ. ಡಾಲರ್ ಮೌಲ್ಯವೃದ್ಧಿ ಬಳಿಕ ಹೂಡಿಕೆದಾರರು ಚಿನ್ನದಿಂದ ದೂರ ಸರಿದರಾದರೂ ಅದು ತಾತ್ಕಾಲಿಕ ಹಂತ ಎಂಬುದು ರುಜುವಾತಾಗಿದೆ. ಈಗ ಚಿನ್ನ ಮತ್ತು ಬೆಳ್ಳಿ ಮತ್ತೆ ಬೇಡಿಕೆ ಕಂಡುಕೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,760 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 1ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 776 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 55,450 ರೂ
  • ಮುಂಬೈ: 55,150 ರೂ
  • ದೆಹಲಿ: 55,300 ರೂ
  • ಕೋಲ್ಕತಾ: 55,150 ರೂ
  • ಕೇರಳ: 55,150 ರೂ
  • ಅಹ್ಮದಾಬಾದ್: 55,200 ರೂ
  • ಜೈಪುರ್: 55,300 ರೂ
  • ಲಕ್ನೋ: 55,300 ರೂ
  • ಭುವನೇಶ್ವರ್: 55,150 ರೂ

ಇದನ್ನೂ ಓದಿ: 25,000 ಮಹಿಳೆಯರಿಗೆ ಆರ್ಥಿಕ ಮತ್ತು ಡಿಜಿಟಲ್ ಸಾಕ್ಷರತೆ ತರಬೇತಿ ನೀಡಲು ಮುಂದಾದ ಕೋಕಾ-ಕೋಲಾ ಕಂಪನಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,185 ರುಪಾಯಿ)
  • ದುಬೈ: 2180 ಡಿರಾಮ್ (49,117 ರುಪಾಯಿ)
  • ಅಮೆರಿಕ: 600 ಡಾಲರ್ (49,652 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (50,029 ರುಪಾಯಿ)
  • ಕತಾರ್: 2,250 ಕತಾರಿ ರಿಯಾಲ್ (51,072 ರೂ)
  • ಓಮನ್: 238 ಒಮಾನಿ ರಿಯಾಲ್ (51,223 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,335 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,650 ರೂ
  • ಚೆನ್ನೈ: 8,070 ರೂ
  • ಮುಂಬೈ: 7,760 ರೂ
  • ದೆಹಲಿ: 7,760 ರೂ
  • ಕೋಲ್ಕತಾ: 7,760 ರೂ
  • ಕೇರಳ: 8,070 ರೂ
  • ಅಹ್ಮದಾಬಾದ್: 7,760 ರೂ
  • ಜೈಪುರ್: 7,760 ರೂ
  • ಲಕ್ನೋ: 7,760 ರೂ
  • ಭುವನೇಶ್ವರ್: 8,070 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!