Gold Silver Price on 1st September: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; 7,000 ರೂ ಮಟ್ಟಕ್ಕಿಂತ ಕಡಿಮೆಗೆ ಇಳಿದ ಚಿನ್ನದ ಬೆಲೆ

Bullion Market 2024 September 1st: ಚಿನ್ನದ ಬೆಲೆ ಇಂದೂ ಕಡಿಮೆಗೊಂಡಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಬಹಳ ಕಡೆ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ಎಲ್ಲೆಡೆ ಕಡಿಮೆಗೊಂಡಿದೆ. ಆಭರಣ ಚಿನ್ನ ಭಾರತದಲ್ಲಿ ಈಗ ಗ್ರಾಮ್​ಗೆ 7,000 ರೂ ಮಟ್ಟಕ್ಕಿಂತ ಕಡಿಮೆಗೆ ಬಂದಿದೆ.

Gold Silver Price on 1st September: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; 7,000 ರೂ ಮಟ್ಟಕ್ಕಿಂತ ಕಡಿಮೆಗೆ ಇಳಿದ ಚಿನ್ನದ ಬೆಲೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 01, 2024 | 10:26 AM

ಬೆಂಗಳೂರು, ಸೆಪ್ಟಂಬರ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಇಳಿದಿವೆ. ಇಂದೂ ಕೂಡ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಆಗಿದೆ. ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ ಗ್ರಾಮ್​ಗೆ 14 ಪೈಸೆ ಇಳಿದಿದೆ. ಚೆನ್ನೈ, ಕೇರಳ ಮುಂತಾದೆಡೆ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 20 ಪೈಸೆ ಕಡಿಮೆ ಆಗಿದೆ. ಚಿನ್ನದ ಬೆಲೆ ವಿದೇಶಗಳಲ್ಲೆಡೆ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 870 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,950 ರೂ
  • ಚೆನ್ನೈ: 66,950 ರೂ
  • ಮುಂಬೈ: 66,950 ರೂ
  • ದೆಹಲಿ: 67,100 ರೂ
  • ಕೋಲ್ಕತಾ: 66,950 ರೂ
  • ಕೇರಳ: 66,950 ರೂ
  • ಅಹ್ಮದಾಬಾದ್: 67,000 ರೂ
  • ಜೈಪುರ್: 67,100 ರೂ
  • ಲಕ್ನೋ: 67,100 ರೂ
  • ಭುವನೇಶ್ವರ್: 66,950 ರೂ

ಇದನ್ನೂ ಓದಿ: ಮೊದಲ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಶೇ. 6.7ರಷ್ಟು ವೃದ್ಧಿ; ಅಧಿಕೃತ ದತ್ತಾಂಶ ಪ್ರಕಟ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (67,020 ರುಪಾಯಿ)
  • ದುಬೈ: 2,807.50 ಡಿರಾಮ್ (64,090 ರುಪಾಯಿ)
  • ಅಮೆರಿಕ: 765 ಡಾಲರ್ (64,180 ರುಪಾಯಿ)
  • ಸಿಂಗಾಪುರ: 1,026 ಸಿಂಗಾಪುರ್ ಡಾಲರ್ (65,880 ರುಪಾಯಿ)
  • ಕತಾರ್: 2,850 ಕತಾರಿ ರಿಯಾಲ್ (65,600 ರೂ)
  • ಸೌದಿ ಅರೇಬಿಯಾ: 2,870 ಸೌದಿ ರಿಯಾಲ್ (64,160 ರುಪಾಯಿ)
  • ಓಮನ್: 299.50 ಒಮಾನಿ ರಿಯಾಲ್ (65,360 ರುಪಾಯಿ)
  • ಕುವೇತ್: 227.90 ಕುವೇತಿ ದಿನಾರ್ (62,430 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,500 ರೂ
  • ಚೆನ್ನೈ: 9,200 ರೂ
  • ಮುಂಬೈ: 8,700 ರೂ
  • ದೆಹಲಿ: 8,700 ರೂ
  • ಕೋಲ್ಕತಾ: 8,700 ರೂ
  • ಕೇರಳ: 9,200 ರೂ
  • ಅಹ್ಮದಾಬಾದ್: 8,700 ರೂ
  • ಜೈಪುರ್: 8,700 ರೂ
  • ಲಕ್ನೋ: 8,700 ರೂ
  • ಭುವನೇಶ್ವರ್: 9,200 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?