ಬೆಂಗಳೂರು, ಸೆಪ್ಟಂಬರ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಇಳಿದಿವೆ. ಇಂದೂ ಕೂಡ ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಆಗಿದೆ. ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ ಗ್ರಾಮ್ಗೆ 14 ಪೈಸೆ ಇಳಿದಿದೆ. ಚೆನ್ನೈ, ಕೇರಳ ಮುಂತಾದೆಡೆ ಗ್ರಾಮ್ಗೆ 10 ಪೈಸೆ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 20 ಪೈಸೆ ಕಡಿಮೆ ಆಗಿದೆ. ಚಿನ್ನದ ಬೆಲೆ ವಿದೇಶಗಳಲ್ಲೆಡೆ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,500 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಮೊದಲ ಕ್ವಾರ್ಟರ್ನಲ್ಲಿ ಭಾರತದ ಜಿಡಿಪಿ ಶೇ. 6.7ರಷ್ಟು ವೃದ್ಧಿ; ಅಧಿಕೃತ ದತ್ತಾಂಶ ಪ್ರಕಟ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ