ಬೆಂಗಳೂರು, ಸೆಪ್ಟೆಂಬರ್ 20: ಚಿನ್ನ ಮತ್ತು ಬೆಳ್ಳಿ (Gold Rates) ದುಬಾರಿಯಾಗುವುದು ಮುಂದುವರಿದಿದೆ. ಭಾರತದಲ್ಲಿ ಚಿನ್ನ ಗ್ರಾಮ್ಗೆ 15 ರೂಗಳಷ್ಟು ಹೆಚ್ಚಿದೆ. ಬೆಳ್ಳಿ ಬೆಲೆಯೂ ಏರಿಕೆ ಆಗಿದೆ. ಬಹುತೇಕ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚಳ ಆಗಿದೆ. ಅಮೆರಿಕದ ಫೆಡರಲ್ ಬ್ಯಾಂಕ್ ಬಡ್ಡಿದರ ಪ್ರಕಟಿಸುವವರೆಗೂ ಈ ಏರಿಕೆಯ ಓಟ ಮುಂದುವರಿಯುವ ಸಾಧ್ಯತೆ ಇದೆ. ಬಡ್ಡಿದರ ಪ್ರಕಟವಾದ ಬಳಿಕವೂ ಚಿನ್ನಕ್ಕಿರುವ ಬೇಡಿಕೆ ತಗ್ಗುವುದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Jio Airfiber Plans: ಬೆಂಗಳೂರು ಸೇರಿ 8 ನಗರಗಳಲ್ಲಿ ಜಿಯೋ ಏರ್ಫೈಬರ್ ಚಾಲನೆ; ಇಲ್ಲಿದೆ ಅದರ ವಿವಿಧ ಪ್ಲಾನ್ಗಳ ಬೆಲೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ