Gold Silver Price on 20th September: ಭಾರತದಲ್ಲಿ ಮುಂದುವರಿದ ಚಿನ್ನ, ಬೆಳ್ಳಿ ಬೆಲೆ ಕುಸಿತ; ವಿದೇಶಗಳಲ್ಲಿ ಬೆಲೆ ಏರಿಕೆ

Bullion Market 2024 September 20th: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಸತತವಾಗಿ ಆಗುತ್ತಿದೆ. ಅಮೆರಿಕದಲ್ಲಿ ಬಡ್ಡಿದರ ತುಸು ಹೆಚ್ಚೇ ಇಳಿಕೆಯಾದರೂ ಚಿನ್ನಕ್ಕೆ ಬೇಡಿಕೆ ಸದ್ಯಕ್ಕೆ ಹೆಚ್ಚಿದಂತೆ ಕಾಣುತ್ತಿಲ್ಲ. ಆದರೆ, ಜಾಗತಿಕವಾಗಿ ಹಲವು ದೇಶಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಹೆಚ್ಚಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,450 ರೂ ಇದ್ದದ್ದು 7,440 ರೂಗೆ ಇಳಿದಿದೆ.

Gold Silver Price on 20th September: ಭಾರತದಲ್ಲಿ ಮುಂದುವರಿದ ಚಿನ್ನ, ಬೆಳ್ಳಿ ಬೆಲೆ ಕುಸಿತ; ವಿದೇಶಗಳಲ್ಲಿ ಬೆಲೆ ಏರಿಕೆ
ಚಿನ್ನ
Follow us
|

Updated on: Sep 20, 2024 | 10:14 AM

ಬೆಂಗಳೂರು, ಸೆಪ್ಟಂಬರ್ 20: ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ ಆದರೂ ಭಾರತದಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆ ಮುಂದುವರಿದಿದೆ. ಆದರೆ ತೀರಾ ಅಲ್ಪ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 1 ರೂ ಮಾತ್ರವೇ ಇಳಿದಿರುವುದು. ಬೆಳ್ಳಿ ಬೆಲೆಯೂ ಕೇವಲ 10 ಪೈಸೆ ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ವಾರಾಂತ್ಯದಲ್ಲಿ ಭಾರತದಲ್ಲೂ ಚಿನ್ನದ ಬೆಲೆ ಏರಿಕೆ ಆಗುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,240 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,090 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,240 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,490 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,240 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 909 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,240 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 849 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,240 ರೂ
  • ಚೆನ್ನೈ: 68,240 ರೂ
  • ಮುಂಬೈ: 68,240 ರೂ
  • ದೆಹಲಿ: 68,390 ರೂ
  • ಕೋಲ್ಕತಾ: 68,240 ರೂ
  • ಕೇರಳ: 68,240 ರೂ
  • ಅಹ್ಮದಾಬಾದ್: 68,290 ರೂ
  • ಜೈಪುರ್: 68,390 ರೂ
  • ಲಕ್ನೋ: 68,390 ರೂ
  • ಭುವನೇಶ್ವರ್: 68,240 ರೂ

ಇದನ್ನೂ ಓದಿ: Petrol Diesel Price on September 20: ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (68,820 ರುಪಾಯಿ)
  • ದುಬೈ: 2,887.50 ಡಿರಾಮ್ (65,720 ರುಪಾಯಿ)
  • ಅಮೆರಿಕ: 785 ಡಾಲರ್ (65,620 ರುಪಾಯಿ)
  • ಸಿಂಗಾಪುರ: 1,045 ಸಿಂಗಾಪುರ್ ಡಾಲರ್ (67,730 ರುಪಾಯಿ)
  • ಕತಾರ್: 2,935 ಕತಾರಿ ರಿಯಾಲ್ (67,300 ರೂ)
  • ಸೌದಿ ಅರೇಬಿಯಾ: 2,960 ಸೌದಿ ರಿಯಾಲ್ (65,940 ರುಪಾಯಿ)
  • ಓಮನ್: 309.50 ಒಮಾನಿ ರಿಯಾಲ್ (67,200 ರುಪಾಯಿ)
  • ಕುವೇತ್: 234.40 ಕುವೇತಿ ದಿನಾರ್ (64,260 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,490 ರೂ
  • ಚೆನ್ನೈ: 9,590 ರೂ
  • ಮುಂಬೈ: 9,090 ರೂ
  • ದೆಹಲಿ: 9,090 ರೂ
  • ಕೋಲ್ಕತಾ: 9,090 ರೂ
  • ಕೇರಳ: 9,590 ರೂ
  • ಅಹ್ಮದಾಬಾದ್: 9,090 ರೂ
  • ಜೈಪುರ್: 9,090 ರೂ
  • ಲಕ್ನೋ: 9,090 ರೂ
  • ಭುವನೇಶ್ವರ್: 9,590 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು