ಬೆಂಗಳೂರು, ಸೆಪ್ಟಂಬರ್ 20: ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ ಆದರೂ ಭಾರತದಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆ ಮುಂದುವರಿದಿದೆ. ಆದರೆ ತೀರಾ ಅಲ್ಪ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 1 ರೂ ಮಾತ್ರವೇ ಇಳಿದಿರುವುದು. ಬೆಳ್ಳಿ ಬೆಲೆಯೂ ಕೇವಲ 10 ಪೈಸೆ ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ವಾರಾಂತ್ಯದಲ್ಲಿ ಭಾರತದಲ್ಲೂ ಚಿನ್ನದ ಬೆಲೆ ಏರಿಕೆ ಆಗುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,240 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,090 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 68,240 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,490 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 20: ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ