Gold Silver Price on 21 September: ಚಿನ್ನ ಅಮೆರಿಕದಲ್ಲಿ ದುಬಾರಿ, ದುಬೈನಲ್ಲಿ ಅಗ್ಗ, ಬೆಳ್ಳಿ ಎಲ್ಲೆಡೆ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ

Bullion Market 2023, September 21st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,230 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,425 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 21 September: ಚಿನ್ನ ಅಮೆರಿಕದಲ್ಲಿ ದುಬಾರಿ, ದುಬೈನಲ್ಲಿ ಅಗ್ಗ, ಬೆಳ್ಳಿ ಎಲ್ಲೆಡೆ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ಬೆಲೆಪಟ್ಟಿ
ಚಿನ್ನ

Updated on: Sep 21, 2023 | 5:00 AM

ಬೆಂಗಳೂರು, ಸೆಪ್ಟೆಂಬರ್ 21: ಇಂದು ಚಿನ್ನದ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿದ್ದರೆ, ಬೆಳ್ಳಿ ಬೆಲೆ (Gold and silver Rates) ತುಸು ಕಡಿಮೆ ಆಗಿದೆ. ಭಾರತದಲ್ಲಿ 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ ಮಾತ್ರವೆ ತುಸು ಏರಿದೆ. ಅಮೆರಿಕದಲ್ಲಿ ಚಿನ್ನ ಏರಿದರೆ, ದುಬೈನಲ್ಲಿ ಬೆಲೆ ಕಡಿಮೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಎಲ್ಲೆಡೆ ಸ್ವಲ್ಪ ತಗ್ಗಿದೆ. ಅಮೆರಿಕದ ಫೆಡರಲ್ ಬ್ಯಾಂಕ್​ನ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿರುವಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,425 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 21ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 742.5 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,200 ರೂ
  • ಚೆನ್ನೈ: 55,500 ರೂ
  • ಮುಂಬೈ: 55,200 ರೂ
  • ದೆಹಲಿ: 55,350 ರೂ
  • ಕೋಲ್ಕತಾ: 55,200 ರೂ
  • ಕೇರಳ: 55,200 ರೂ
  • ಅಹ್ಮದಾಬಾದ್: 55,250 ರೂ
  • ಜೈಪುರ್: 55,350 ರೂ
  • ಲಕ್ನೋ: 55,350 ರೂ
  • ಭುವನೇಶ್ವರ್: 55,200 ರೂ

ಇದನ್ನೂ ಓದಿ: ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಆಧಾರ್, ಪ್ಯಾನ್ ಲಿಂಕ್ ಮಾಡುವುದಕ್ಕೆ ಸೆಪ್ಟೆಂಬರ್ 30 ಡೆಡ್​ಲೈನ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,493 ರುಪಾಯಿ)
  • ದುಬೈ: 2162.50 ಡಿರಾಮ್ (48,914 ರುಪಾಯಿ)
  • ಅಮೆರಿಕ: 595 ಡಾಲರ್ (49,437 ರುಪಾಯಿ)
  • ಸಿಂಗಾಪುರ: 820 ಸಿಂಗಾಪುರ್ ಡಾಲರ್ (49,999 ರುಪಾಯಿ)
  • ಕತಾರ್: 2,235 ಕತಾರಿ ರಿಯಾಲ್ (51,007 ರೂ)
  • ಓಮನ್: 236 ಒಮಾನಿ ರಿಯಾಲ್ (51,000 ರುಪಾಯಿ)
  • ಕುವೇತ್: 186 ಕುವೇತಿ ದಿನಾರ್ (50,117 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,425 ರೂ
  • ಚೆನ್ನೈ: 7,800 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us