ಬೆಂಗಳೂರು, ಸೆಪ್ಟಂಬರ್ 22: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿಯಾಗಿ ಹೆಚ್ಚಾಗಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 150 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ ಎರಡು ರೂನಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಚಿನ್ನ, ಬೆಳ್ಳಿ ಬೆಲೆ ತೀಕ್ಷ್ಣವಾಗಿ ಏರಿಕೆ ಆಗಿದೆ. ಅಮೆರಿಕದಲ್ಲಿ ಬಡ್ಡಿದರ ಇಳಿಕೆ ಬಳಿಕ ಈ ಏರಿಕೆ ನಿರೀಕ್ಷಿತವೇ ಆಗಿದೆ. ಒಂದು ತಿಂಗಳಲ್ಲಿ ಚಿನ್ನದ ಬೆಲೆ ಸುಮಾರು 250 ರೂನಷ್ಟು ಹೆಚ್ಚಳವಾದಂತಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 69,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 75,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 69,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,500 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 22: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ