Gold Silver Price on 25th September: ಮೊದಲ ಬಾರಿಗೆ 7,700 ರೂ ಗಡಿ ದಾಟಿದ ಚಿನ್ನದ ಬೆಲೆ; ಬೆಳ್ಳಿ ಬೆಲೆಯೂ ದಾಖಲೆ

Bullion Market 2024 September 25th: ಚಿನ್ನದ ಬೆಲೆ ಸತತ ಮೂರನೇ ದಿನವೂ ಹೆಚ್ಚಳವಾಗಿದೆ. ಇಂದು ಅದು ಗ್ರಾಮ್​ಗೆ 60 ರೂನಷ್ಟು ಬೆಲೆ ಹೆಚ್ಚಳ ಕಂಡಿದೆ. ಅಪರಂಜಿ ಚಿನ್ನ 7,702 ರೂ ಆಗಿದೆ. ಚೆನ್ನೈ, ಕೇರಳ ಮೊದಲಾದೆಡೆ ಬೆಳ್ಳಿ ಬೆಲೆ ಗ್ರಾಮ್​ಗೆ 100 ರೂ ಗಡಿ ದಾಟಿದೆ.

Gold Silver Price on 25th September: ಮೊದಲ ಬಾರಿಗೆ 7,700 ರೂ ಗಡಿ ದಾಟಿದ ಚಿನ್ನದ ಬೆಲೆ; ಬೆಳ್ಳಿ ಬೆಲೆಯೂ ದಾಖಲೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2024 | 10:41 AM

ಬೆಂಗಳೂರು, ಸೆಪ್ಟಂಬರ್ 25: ಚಿನ್ನದ ಬೆಲೆಯ ನಾಗಾಲೋಟ ಮುಂದುವರಿದೆ. ಷೇರುಮಾರುಕಟ್ಟೆ ಹೊಸ ದಾಖಲೆ ಎತ್ತರಕ್ಕೆ ಹೋದಂತೆ ಚಿನ್ನದ ಬೆಲೆಯೂ ಹೊಸ ಮೈಲಿಗಲ್ಲುಗಳನ್ನು ದಾಟುತ್ತಿದೆ. ಭಾರತದಲ್ಲಿ ಅಪರಂಜಿ ಚಿನ್ನ ಮೊದಲ ಬಾರಿಗೆ 7,700 ರೂ ಗಡಿ ದಾಟಿದೆ. ಆಭರಣ ಚಿನ್ನದ ಓಟವೂ ಮುಂದುವರಿದಿದೆ. ಬೆಳ್ಳಿ ಬೆಲೆ ಮುಂಬೈನಲ್ಲಿ ಕಡಿಮೆ ಆದರೂ ಚೆನ್ನೈ, ಕೇರಳ ಮೊದಲಾದೆಡೆ ಹೊಸ ಮೈಲಿಗಲ್ಲು ದಾಟಿದೆ. ಅಲ್ಲೆಲ್ಲಾ ಬೆಳ್ಳಿ ಬೆಲೆ ಗ್ರಾಮ್​ಗೆ 100 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ 87 ರೂ ಬೆಲೆ ಮುಂದುವರಿದಿದೆ. ಉಳಿದ ಕಡೆ 95 ರೂ ಬೆಲೆ ಇದೆ. ವಿದೇಶಗಳಲ್ಲಿ ಇಂದು ಬುಧವಾರ ಕೆಲವೆಡೆ ಚಿನ್ನದ ಬೆಲೆ ಏರಿದೆ, ಇನ್ನೂ ಕೆಲವೆಡೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,280 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 928 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 870 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,600 ರೂ
  • ಚೆನ್ನೈ: 70,600 ರೂ
  • ಮುಂಬೈ: 70,600 ರೂ
  • ದೆಹಲಿ: 70,750 ರೂ
  • ಕೋಲ್ಕತಾ: 70,600 ರೂ
  • ಕೇರಳ: 70,600 ರೂ
  • ಅಹ್ಮದಾಬಾದ್: 70,650 ರೂ
  • ಜೈಪುರ್: 70,750 ರೂ
  • ಲಕ್ನೋ: 70,750 ರೂ
  • ಭುವನೇಶ್ವರ್: 70,600 ರೂ

ಇದನ್ನೂ ಓದಿ: ಆಲೂಗಡ್ಡೆಯಿಂದ ಎಥನಾಲ್ ಇಂಧನ; ಸಿಪಿಆರ್​ಐನಿಂದ ಸದ್ಯದಲ್ಲೇ ಪ್ರಾಯೋಗಿಕ ಘಟಕ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (70,500 ರುಪಾಯಿ)
  • ದುಬೈ: 2,945 ಡಿರಾಮ್ (66,990 ರುಪಾಯಿ)
  • ಅಮೆರಿಕ: 800 ಡಾಲರ್ (66,840 ರುಪಾಯಿ)
  • ಸಿಂಗಾಪುರ: 1,061 ಸಿಂಗಾಪುರ್ ಡಾಲರ್ (69,100 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (68,300 ರೂ)
  • ಸೌದಿ ಅರೇಬಿಯಾ: 3,010 ಸೌದಿ ರಿಯಾಲ್ (67,030 ರುಪಾಯಿ)
  • ಓಮನ್: 314.50 ಒಮಾನಿ ರಿಯಾಲ್ (68,250 ರುಪಾಯಿ)
  • ಕುವೇತ್: 238.70 ಕುವೇತಿ ದಿನಾರ್ (65,360 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,700 ರೂ
  • ಚೆನ್ನೈ: 10,100 ರೂ
  • ಮುಂಬೈ: 9,280 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ