AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 26 September: ಚಿನ್ನ, ಬೆಳ್ಳಿ ಬೆಲೆ ಭಾರತದಲ್ಲಿ ಯಥಾಸ್ಥಿತಿ, ವಿದೇಶಗಳಲ್ಲಿ ಇಳಿಕೆ; ಇವತ್ತಿನ ದರಗಳೆಷ್ಟು, ಇಲ್ಲಿದೆ ಪಟ್ಟಿ

Bullion Market 2023, September 26th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,950 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 26 September: ಚಿನ್ನ, ಬೆಳ್ಳಿ ಬೆಲೆ ಭಾರತದಲ್ಲಿ ಯಥಾಸ್ಥಿತಿ, ವಿದೇಶಗಳಲ್ಲಿ ಇಳಿಕೆ; ಇವತ್ತಿನ ದರಗಳೆಷ್ಟು, ಇಲ್ಲಿದೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 26, 2023 | 5:00 AM

Share

ಬೆಂಗಳೂರು, ಸೆಪ್ಟೆಂಬರ್ 26: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold and silver Rates) ಇಳಿದಿವೆ. ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿಯಲ್ಲಿದೆಯಾದರೂ ಬೇರೆ ಕೆಲ ದೇಶಗಳಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೆಲವೆಡೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಳೆಗಳೆರಡೂ ಕಡಿಮೆ ಆಗುವ ಸಾಧ್ಯತೆ ಇದೆ. ಕಳೆದ ಕೆಲ ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಏರಿಳಿತ ಕಾಣುತ್ತಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,580 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 26ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 758 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,950 ರೂ
  • ಚೆನ್ನೈ: 55,210 ರೂ
  • ಮುಂಬೈ: 54,950 ರೂ
  • ದೆಹಲಿ: 55,100 ರೂ
  • ಕೋಲ್ಕತಾ: 54,950 ರೂ
  • ಕೇರಳ: 54,950 ರೂ
  • ಅಹ್ಮದಾಬಾದ್: 55,000 ರೂ
  • ಜೈಪುರ್: 55,100 ರೂ
  • ಲಕ್ನೋ: 55,100 ರೂ
  • ಭುವನೇಶ್ವರ್: 54,950 ರೂ

ಇದನ್ನೂ ಓದಿ: October New Rules: ಆನ್​ಲೈನ್ ಗೇಮಿಂಗ್​ಗೆ ಶೇ. 20 ಟಿಸಿಎಸ್ ತೆರಿಗೆ ಸೇರಿದಂತೆ 5 ನಿಯಮಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,561 ರುಪಾಯಿ)
  • ದುಬೈ: 2155 ಡಿರಾಮ್ (48,763 ರುಪಾಯಿ)
  • ಅಮೆರಿಕ: 590 ಡಾಲರ್ (49,038 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,713 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,721 ರೂ)
  • ಓಮನ್: 235.50 ಒಮಾನಿ ರಿಯಾಲ್ (50,840 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (49,752 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,500 ರೂ
  • ಚೆನ್ನೈ: 7,900 ರೂ
  • ಮುಂಬೈ: 7,580 ರೂ
  • ದೆಹಲಿ: 7,580 ರೂ
  • ಕೋಲ್ಕತಾ: 7,580 ರೂ
  • ಕೇರಳ: 7,900 ರೂ
  • ಅಹ್ಮದಾಬಾದ್: 7,580 ರೂ
  • ಜೈಪುರ್: 7,580 ರೂ
  • ಲಕ್ನೋ: 7,580 ರೂ
  • ಭುವನೇಶ್ವರ್: 7,900 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ