ಬೆಂಗಳೂರು, ಸೆಪ್ಟೆಂಬರ್ 26: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ (Gold and silver Rates) ಇಳಿದಿವೆ. ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿಯಲ್ಲಿದೆಯಾದರೂ ಬೇರೆ ಕೆಲ ದೇಶಗಳಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಕೆಲವೆಡೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಳೆಗಳೆರಡೂ ಕಡಿಮೆ ಆಗುವ ಸಾಧ್ಯತೆ ಇದೆ. ಕಳೆದ ಕೆಲ ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಏರಿಳಿತ ಕಾಣುತ್ತಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,580 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,500 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: October New Rules: ಆನ್ಲೈನ್ ಗೇಮಿಂಗ್ಗೆ ಶೇ. 20 ಟಿಸಿಎಸ್ ತೆರಿಗೆ ಸೇರಿದಂತೆ 5 ನಿಯಮಗಳು
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ