ಬೆಂಗಳೂರು, ಸೆಪ್ಟಂಬರ್ 26: ಭಾರತದಲ್ಲಿ ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಕಳೆದ ಮೂರು ದಿನಕ್ಕೆ ಹೋಲಿಸಿದರೆ ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಗ್ರಾಮ್ಗೆ ಒಂದು ರೂನಷ್ಟು ಮಾತ್ರ ಬೆಲೆ ಏರಿಕೆ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿಗಿನ ಏರಿಳಿತಗಳಾಗಿವೆ. ಕೆಲವೆಡೆ ಬೆಲೆ ಹೆಚ್ಚಳವಾದರೆ ಕೆಲವೆಡೆ ಇಳಿಕೆ ಆಗಿದೆ. ಭಾರತದಲ್ಲಿ ಬೆಳ್ಳಿ ಬೆಲೆಯೂ ಏರಿಳಿತ ಕಂಡಿದೆ. ಮುಂಬೈ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆ ಕಡಿಮೆ ಆಗಿದೆ. ಚೆನ್ನೈ ಮೊದಲಾದ ಕೆಲವೆಡೆ 10 ಪೈಸೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 90 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 70,610 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 77,030 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,270 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 70,610 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,010 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಚಿನ್ನದ ಬೆಲೆ ಗಗನದತ್ತ; ಹೊಸ ಮೈಲಿಗಲ್ಲುಗಳನ್ನು ದಾಟಲು ಕಾರಣವಾಗಿರುವ ವಿದ್ಯಮಾನಗಳೇನು?
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ