ಬೆಂಗಳೂರು, ಸೆಪ್ಟಂಬರ್ 27: ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಯ ಸಖತ್ ಓಟ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್ಗೆ 39 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಗಣನೀಯವಾಗಿ ಹೆಚ್ಚಾಗಿದೆ. ಗ್ರಾಮ್ಗೆ 96 ರೂ ಆಗಿದೆ. ಚೆನ್ನೈ, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ 102 ರೂಗೆ ಏರಿದೆ. ಕಳೆದ 10 ದಿನದಲ್ಲಿ ಇದರ ಬೆಲೆ ಗ್ರಾಮ್ಗೆ 5 ರೂನಷ್ಟು ಹೆಚ್ಚಳವಾಗಿದೆ. ಚಿನ್ನದ ಬೆಲೆ ಭಾರತದಲ್ಲಿ ಹತ್ತು ದಿನದಲ್ಲಿ ಬಹುತೇಕ 300 ರೂನಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,100 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 71,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 77,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 71,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,000 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 27: ಆಂಧ್ರಪ್ರದೇಶ, ಕೇರಳದಲ್ಲಿ ಪೆಟ್ರೋಲ್ ಬೆಲೆ ಇಳಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ