AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28 September: ಇನ್ನಷ್ಟು ಇಳಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ಚಿನ್ನ ಮತ್ತು ಬೆಳ್ಳಿ ದರಪಟ್ಟಿ

Bullion Market 2023, September 28th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28 September: ಇನ್ನಷ್ಟು ಇಳಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ಚಿನ್ನ ಮತ್ತು ಬೆಳ್ಳಿ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 28, 2023 | 5:00 AM

ಬೆಂಗಳೂರು, ಸೆಪ್ಟೆಂಬರ್ 28: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ (Gold and silver Rates) ಇನ್ನಷ್ಟು ಮುಂದುವರಿದಿದೆ. ಭಾರತ ಮತ್ತು ವಿಶ್ವದ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯಲ್ಲೂ ಸಾಕಷ್ಟು ಕಡಿಮೆ ಆಗಿದೆ. ಕಳೆದ ಕೆಲ ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಏರಿಳಿತ ಕಾಣುತ್ತಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,420 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 28ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 742 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,500 ರೂ
  • ಚೆನ್ನೈ: 54,800 ರೂ
  • ಮುಂಬೈ: 54,500 ರೂ
  • ದೆಹಲಿ: 54,650 ರೂ
  • ಕೋಲ್ಕತಾ: 54,500 ರೂ
  • ಕೇರಳ: 54,500 ರೂ
  • ಅಹ್ಮದಾಬಾದ್: 54,550 ರೂ
  • ಜೈಪುರ್: 54,650 ರೂ
  • ಲಕ್ನೋ: 54,650 ರೂ
  • ಭುವನೇಶ್ವರ್: 54,500 ರೂ

ಇದನ್ನೂ ಓದಿ: ಒಂದು ಎಕರೆಯಲ್ಲಿ ಈ ಮರಗಳನ್ನು ನೆಟ್ಟರೆ 12 ಲಕ್ಷ ರೂ ಆದಾಯ; ನಿಮ್ಮಲ್ಲಿ ಜಮೀನಿದ್ದರೆ ಈ ಮರದ ತೋಪು ನಿರ್ಮಿಸಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (49,938 ರುಪಾಯಿ)
  • ದುಬೈ: 2,125 ಡಿರಾಮ್ (48,127 ರುಪಾಯಿ)
  • ಅಮೆರಿಕ: 585 ಡಾಲರ್ (48,654 ರುಪಾಯಿ)
  • ಸಿಂಗಾಪುರ: 810 ಸಿಂಗಾಪುರ್ ಡಾಲರ್ (49,136 ರುಪಾಯಿ)
  • ಕತಾರ್: 2,200 ಕತಾರಿ ರಿಯಾಲ್ (50,189 ರೂ)
  • ಓಮನ್: 231.50 ಒಮಾನಿ ರಿಯಾಲ್ (50,015 ರುಪಾಯಿ)
  • ಕುವೇತ್: 183 ಕುವೇತಿ ದಿನಾರ್ (49,227 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,700 ರೂ
  • ಮುಂಬೈ: 7,420 ರೂ
  • ದೆಹಲಿ: 7,420 ರೂ
  • ಕೋಲ್ಕತಾ: 7,420 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,420 ರೂ
  • ಜೈಪುರ್: 7,420 ರೂ
  • ಲಕ್ನೋ: 7,420 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್